ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಆಗಸ್ಟ್ 19: ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ, 20 ಕ್ರಸ್ಟ್ ಗೇಟ್ ಗಳ ಮೂಲಕ ಒಂದು ಲಕ್ಷದ ಹತ್ತು ಸಾವಿರ ಕ್ಯೂಸೆಕ್ ಗೂ ಅಧಿಕ ನೀರನ್ನು ನದಿಗೆ ಹರಿಸಲಾಗಿದೆ.

1633 ಅಡಿ ಎತ್ತರದ 100 ಟಿಎಂಸಿ ಸಾಮಾರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯ ಇದೀಗ ಭರ್ತಿಯಾಗಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಮಳೆಯಾಗಿಲ್ಲ, ಆದರೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಕೊಯ್ನಾ ಜಲಾಶಯದಿಂದ ಸತತ ನೀರು ಬಿಡುಗಡೆ; ಕೃಷ್ಣಾ ನದಿ ಹೊರಹರಿವು ಹೆಚ್ಚಳಕೊಯ್ನಾ ಜಲಾಶಯದಿಂದ ಸತತ ನೀರು ಬಿಡುಗಡೆ; ಕೃಷ್ಣಾ ನದಿ ಹೊರಹರಿವು ಹೆಚ್ಚಳ

ಜಲಾಶಯದಿಂದ ನೀರು ಬಿಟ್ಟ ಹಿನ್ನಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವುದಕ್ಕೆ ಜಿಲ್ಲಾಡಳಿತ ಆದೇಶ ನೀಡಿದ್ದು, ಮತ್ತಷ್ಟು ಒಳಹರಿವು ಹೆಚ್ಚಾದರೆ ನಾಳೆ ಸಂಜೆ ವೇಳೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ.

Purandara Dasa Mantap At Hampi Submerged As Heavy Water Discharged From TB Dam

ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರನ್ನು ನದಿಗೆ ಬಿಟ್ಟ ಪರಿಣಾಮ, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಇನ್ನೂ ಕೆಲ ಸ್ಮಾರಕಗಳು ಮುಳುಗಡೆಯ ಭೀತಿಯಲ್ಲಿವೆ.

ರಾಮನಗರ: ಉಕ್ಕಿ ಹರಿಯುತ್ತಿದೆ ಕಾವೇರಿ ಸಂಗಮ, ಜಿಲ್ಲಾಧಿಕಾರಿ ಎಚ್ಚರಿಕೆರಾಮನಗರ: ಉಕ್ಕಿ ಹರಿಯುತ್ತಿದೆ ಕಾವೇರಿ ಸಂಗಮ, ಜಿಲ್ಲಾಧಿಕಾರಿ ಎಚ್ಚರಿಕೆ

ಪುರಂದರ ದಾಸರ ಮಂಟಪ, ಸಾಲುಮಂಟಪ, ಧಾರ್ಮಿಕ ವಿಧಿಗಳನ್ನು ಮಾಡುವ ಮಂಟಪಗಳು ಸೇರಿದಂತೆ ಹಲವು ಸ್ಮಾರಕ ಮುಳುಗಡೆಯಾಗಿದ್ದು, ಹಂಪಿಯಿಂದ ವಿರೂಪಾಪುಗಡ್ಡೆ ತೆರಳುವ ಬೋಟ್ ನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ನದಿಯಲ್ಲಿ ತೆಪ್ಪ ಹಾಕದಂತೆಯೂ ಎಚ್ಚರಿಕೆ ನೀಡಲಾಗಿದೆ.

Purandara Dasa Mantap At Hampi Submerged As Heavy Water Discharged From TB Dam

ತುಂಗಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದ್ದು, ಕಂಪ್ಲಿ ಮತ್ತು ಗಂಗಾವತಿ ಮಧ್ಯೆ ಇರುವ ಸೇತುವೆಗಳು ಕೂಡಾ ಮುಳುಗಡೆಯ ಭೀತಿಯಲ್ಲಿವೆ.

English summary
From Tungabhadra reservoir in Ballari district, over one lakh ten thousands of cusecs of water have been dumped into the Tungabhadra river through 20 crust gates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X