ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದ ವಿಮ್ಸ್ ವೈದ್ಯರಿಗೆ ಕ್ವಾರೆಂಟೈನ್

|
Google Oneindia Kannada News

ಬಳ್ಳಾರಿ, ಮೇ.18: ನೊವೆಲ್ ಕೊರೊನಾ ವೈರಸ್ ಸೋಂಕಿತನಿಗೆ ಚಿಕಿತ್ಸೆ ನೀಡಿದ ವಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಆತಂಕ ಎದುರಾಗಿದೆ. ವೈದ್ಯರನ್ನು ಹಾಗೂ ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕ್ವಾರೆಂಟೈನ್ ನಲ್ಲಿ ಇರಿಸಲು ಶೋಧ ನಡೆಸಲಾಗುತ್ತಿದೆ.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 61 ವರ್ಷದ ವೃದ್ಧನಿಗೆ ನೊವೆಲ್ ಕೊರೊನಾ ವೈರಸ್ ಸೋಂಕು ಇರುವುದು ಕನ್ಫರ್ಮ್ ಆಗಿದೆ. ಸೋಂಕಿತನನ್ನು ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ? ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?

ಬಳ್ಳಾರಿ ಮೂಲದ ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಹಾಗೂ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರನ್ನು ಕ್ವಾರೆಂಟೈನ್ ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೂ ಸಹ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಲಾಗುತ್ತದೆ.

Quarantine For Vims Hospital Doctors And Nurse Who Contact With Coronavirus Patient

ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ:

ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗುವ ಮೊದಲು 61 ವರ್ಷದ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಸೋಂಕಿತನ ಟ್ರಾವೆಲ್ ಹಿಸ್ಟರಿ ಹಾಗೂ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

English summary
Quarantine For Vims Hospital Doctors And Nurse Who Contact With Coronavirus Patient.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X