ಬಳ್ಳಾರಿಯಲ್ಲಿ ರಾಮುಲು ಪರ ರಾಜನಾಥ್ ಮತಯಾಚನೆ

ಬಳ್ಳಾರಿ, ಏ.9: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರು ಮತಯಾಚನೆ ಮಾಡಿದರು. ದೇಶದ ಹಿತಕ್ಕಾಗಿ, ರಾಷ್ಟ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ, ಮೋದಿ ಅವರನ್ನು ಪ್ರಧಾನಿ ಮಾಡಲು ಬೆಂಬಲ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ದೇಶಕ್ಕೆ ಸ್ವಾತಂತ್ರ್ಯ ಬಂದು 67 ವರ್ಷಗಳಾದರೂ 55 ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ದೇಶದ ಆರ್ಥಿಕ ಸುಧಾರಣೆಗೆ, ಬಡತನ ನಿವಾರಣೆ, ಮಾನವ ಸಂಪನ್ಮೂಲ ಹಾಗೂ ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿಗೆ ಯತ್ನಿಸಿಲ್ಲ.ಕಳೆದ 10 ವರ್ಷದ ಅಧಿಕಾರವಧಿಯಲ್ಲಂತೂ ಬಹುಕೋಟಿ ಭ್ರಷ್ಟಾಚಾರ ಹಗರಣಗಳು ಬೆಳಕಿಗೆ ಬಂದಿವೆ. ಬೆಲೆ ಏರಿಕೆ ನಿಯಂತ್ರಣ ಹಾಗೂ ಮಹಿಳೆಯರಿಗೆ ರಕ್ಷಣೆ ಕಲ್ಪಿಸುವಲ್ಲಿ ಕಾಂಗ್ರೆಸ್ ಸೋತಿದೆ.

BJP President Rajanath Singh seeks votes on behalf of B Sriramulu

ಅಗತ್ಯ ವಸ್ತುಗಳ ಬೆಲೆ ಏರಿಕೆ ಕಾಂಗ್ರೆಸ್ ನ ಸಾಧನೆಯಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸೀಮೆಎಣ್ಣೆ ಬೆಲೆ ಹೆಚ್ಚಿಸಿ ಬಡವರ ಬದುಕು ದುಸ್ತರ ಮಾಡಿದೆ. ಬೆಲೆ ಏರಿಕೆ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ‌ಗೆ ಸಾಧ್ಯವಾಗಿಲ್ಲ. ಸದ್ಯ ದೇಶ ಸಂಕಟದ ಪರಿಸ್ಥಿತಿಯಲ್ಲಿದ್ದು, ಎನ್‌ಡಿಎನಿಂದ ಮಾತ್ರ ದೇಶವನ್ನು ಸಂಕಟ ಪರಿಸ್ಥಿತಿಯಿಂದ ಪಾರು ಮಾಡಲು ಸಾಧ್ಯ ಎಂದರು.

ಎನ್ ‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿಯಾದರೆ ಬೆಲೆ ಏರಿಕೆ ತಡೆಗೆ ಆಯೋಗವನ್ನು ರಚಿಸಲಾಗುವುದು. ಇಂದು ದೇಶದಲ್ಲಿ ಮೋದಿ ಅಲೆ ಎಂಬ ಮಹಾಪರಿವರ್ತನೆಯ ಗಾಳಿ ಇದ್ದು, ಜನರು ಬಿಜೆಪಿ ಕೈ ಹಿಡಿಯಲಿದ್ದಾರೆ. ಎನ್ ‌ಡಿಎ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.
ಎನ್ ‌ಡಿಎ ಅಧಿಕಾರಕ್ಕೆ ಬಂದರೆ ಬಳ್ಳಾರಿಯನ್ನು ಉಕ್ಕಿನನಗರಿಯನ್ನಾಗಿ ಮಾಡುತ್ತೇವೆ ಎಂದು ಬಿಜೆಪಿ ಅಧ್ಯಕ್ಷ ರಾಜ್ ‌ನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ ‌ನಾಥ್ ಸಿಂಗ್, ಈ ಲೋಕಸಭಾ ಚುನಾವಣೆಯಲ್ಲಿ ಎನ್ ‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಬಳ್ಳಾರಿಯನ್ನು ಉಕ್ಕಿನನಗರಿಯನ್ನಾಗಿ ಮಾಡುತ್ತೇವೆ ಎಂದರು.
ಬಳ್ಳಾರಿಯಲ್ಲಿ ರಾಜನಾಥ್ ಸಿಂಗ್ ಚಿತ್ರಗಳು(@BSYBJP) ಟ್ವೀಟ್ ನಿಂದ ಸಿಕ್ಕಿದ್ದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+