ಜೆಡಿಎಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಪರಿಣಾಮ ಬಿಜೆಪಿ ಮೇಲೆ ಬೀರುವುದಿಲ್ಲ: ಶ್ರೀರಾಮುಲು
ಬಳ್ಳಾರಿ, ಜನವರಿ, 02: ರಾಜ್ಯದಲ್ಲಿ ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳ ಪರಿಣಾಮ ಬಿಜೆಪಿ ಮೇಲೆ ಬೀರದು ಎಂದು ಜಿಲ್ಲಾ ಉಸ್ತುವಾರಿ
ಸಚಿವ ಬಿ.ಶ್ರೀರಾಮುಲು ಹೇಳಿದರು.
ಬಳ್ಳಾರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಸ್ನೇಹಿತ ಜನಾರ್ಧನ್ ರೆಡ್ಡಿಯ ಹೊಸ ಪಕ್ಷದ ಪ್ರಭಾವ ಬೀರಲ್ಲ ಎಂದಿದ್ದಾರೆ. ಶ್ರೀರಾಮುಲು ಮುಖ ನೋಡಿ, ಮತ್ತೊಬ್ಬರು (ಜನಾರ್ಧನ್ ರೆಡ್ಡಿ) ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲ ಕಲ್ಯಾಣ ಕರ್ಣಾಟಕದ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ. ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.
ಪ್ರಾದೇಶಿಕ ಪಕ್ಷ ಪ್ರಭಾವ ಬೀರುವುದಿಲ್ಲ
ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ನಮ್ಮ ಮೇಲೆ ಪ್ರಭಾವ ಬೀರುವುದಿಲ್ಲ. ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್, ಕರುಣಾಕರ್ ರೆಡ್ಡಿ, ಸೋಮಶೇಖರ್ ರೆಡ್ಡಿ ಗೆಲುವು ಸಾಧಿಸಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಪಕ್ಷ ಕಟ್ಟಬಹುದು, ಚುನಾವಣೆಯಲ್ಲಿ ಸ್ಪರ್ಧಿಸಬಹು. ಆದರೆ ಜನರ ಒಲವು ಬಿಜೆಪಿ ಪಕ್ಷದ ಮೇಲೆ ಇದೆ. ದೇಶದ ಚುನಾವಣೆ ಮೋದಿ ಹಾಗೂ ರಾಜ್ಯದ ಚುನಾವಣೆ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ಪ್ರಾದೇಶಿಕ ಪಕ್ಷದಿಂದ ಕಾರ್ಯಕರ್ತರಲ್ಲಿ ಯಾವದೇ ಗೊಂದಲ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದರು.

ಕಾಂಗ್ರೆಸ್ ಜನರಿಗೆ ಟೋಪಿ ಹಾಕುತ್ತಾ ಬಂದಿದೆ
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ನವರು ಟೋಪಿ ಹಾಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್‌ನವರು ಮೀಸಲಾತಿ ವಿಚಾರದಲ್ಲಿ ಯಾರಿಗೂ ನ್ಯಾಯ ಕೊಟಿಲ್ಲ ಎಂದಿದ್ದಾರೆ. ಆದರೆ ಮೀಸಲಾತಿ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡುವ ನೈತಿಕತೆ ಇಲ್ಲ. ಐವತ್ತು ವರ್ಷಗಳಿಂದ ಕಾಂಗ್ರೆಸ್ ಜನರಿಗೆ ಟೋಪಿ ಹಾಕುತ್ತಾ ಬಂದಿದೆ ಎಂದು ವಾಗ್ದಾಳಿ ನಡೆಸಿದರು.












Click it and Unblock the Notifications