Get Updates
Get notified of breaking news, exclusive insights, and must-see stories!

Sandur By Election: ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ಕೊಟ್ಟ ಡಿಸಿ

ಬಳ್ಳಾರಿ, ಅಕ್ಟೋಬರ್ 21: ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ, ಚುನಾವಣಾ ಪ್ರಚಾರದ ಕುರಿತು ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Sandur By Election 2024 Ballari DC Meeting With Representatives Of Various Political Parties

ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, "ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಸಾರ್ವಜನಿಕ ಸಭೆ, ಸಮಾರಂಭ, ರ‍್ಯಾಲಿ ನಡೆಸಲು, ಕಟ್ಟಡ ಬಳಕೆ, ವಾಹನ ಹಾಗೂ ಇನ್ನಿತರೆ ನಿಯಮಗಳಿಗೆ ಸುವಿಧಾ ತಂತ್ರಾಂಶ ಮೂಲಕ ಅನುಮತಿ ಕಡ್ಡಾಯವಾಗಿ ಪಡೆಯಬೇಕು" ಎಂದು ಹೇಳಿದರು.

ಅಧಿಸೂಚನೆ ಪ್ರಕಟ: ಸಂಡೂರು ವಿಧಾನಸಭೆ ಉಪಚುನಾವಣೆ-2024ಕ್ಕೆ ಅಕ್ಟೋಬರ್ 18ರಂದು ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಬಿಜೆಪಿ ಉಪ ಚುನಾವಣೆಗೆ ಬಂಗಾರು ಹನುಮಂತ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

ಅಕ್ಟೋಬರ್ 28ರ ಸೋಮವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ನವೆಂಬರ್ 13ರ ಬುಧವಾರ ಮತದಾನ, ನವೆಂರ್ 23ರ ಶನಿವಾರ ಮತ ಎಣಿಕೆ ಕಾರ್ಯ ನಡೆಯಲಿದೆ.

ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರಿದ್ದಾರೆ. 1,17,789 ಪುರುಷ ಮತದಾರರು, 1,18,282 ಮಹಿಳೆ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗುತ್ತದೆ.

ಉಪ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಚುನಾವಣಾ ಆಯೋಗವು ಜಾರಿಗೊಳಿಸಿರುವ ನಿಯಮಗಳನ್ನು ರಾಜಕೀಯ ಪಕ್ಷಗಳು ತಪ್ಪದೇ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ಪಕ್ಷದ ಚಿಹ್ನೆ ಹೊಂದಿರುವ ವಾಹನ, ಫ್ಲೆಕ್ಸ್ ಹಾಗೂ ಇನ್ನಿತರೆ ರಾಜಕೀಯ ಸಂಬಂಧ ಬ್ಯಾನರ್‌ಗಳಿದ್ದಲ್ಲಿ ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಈ ಕುರಿತು ಪಕ್ಷದ ಮುಖಂಡರುಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ತಿಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಚುನಾವಣಾ ಪ್ರಚಾರದ ಅಂಗವಾಗಿ ರಾಜಕೀಯ ಪಕ್ಷದವರು ಯಾವುದೇ ರ‍್ಯಾಲಿ, ಸಭೆ, ಸಮಾರಂಭ ಆಯೋಜಿಸುವುದಕ್ಕೆ ಅನುಮತಿ ಪಡೆಯಬೇಕು. ಇನ್ನುಳಿದ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಸಭೆ, ಸಮಾರಂಭ ಆಯೋಜಿಸಲು ಅಡ್ಡಿಯಿಲ್ಲ. ಆದರೆ ಅಲ್ಲಿ ಸಂಡೂರು ಉಪಚುನಾವಣೆಯ ಕಾರ್ಯಚಟುವಟಿಕೆ ಕುರಿತಂತೆ ಯಾವುದೇ ರೀತಿಯ ಪ್ರಚಾರ ಮಾಡುವಂತಿಲ್ಲ.

ಸಂಡೂರು ಭಾಗದಲ್ಲಿ ಸಾಕಷ್ಟು ಕಾರ್ಖಾನೆ ಪ್ರದೇಶಗಳಿದ್ದು, ಕಾರ್ಮಿಕರು ಮತದಾನ ಪ್ರಕ್ರಿಯೆಯಿಂದ ದೂರ ಉಳಿಯದಂತೆ ಪ್ರತಿಯೊಬ್ಬರಿಗೂ ಮತ ಚಲಾಯಿಸುವಂತೆ ಪ್ರೇರೇಪಿಸುವ ಕರ್ತವ್ಯ ಜಿಲ್ಲಾಡಳಿತ ನಿರ್ವಹಿಸುತ್ತದೆ. ಅದರಂತೆ ಪಕ್ಷದವರು ಮತ ಯಾಚಿಸಲು ಚುನಾವಣೆ ಆಯೋಗದ ನಿರ್ದೇಶನದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.

ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ಉಪ ಚುನಾವಣೆ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭರಾಣಿ ವಿ. ಜೆ. ಮಾತನಾಡಿ, "ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷದ ಮುಖಂಡರುಗಳು ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದ ನೀಡಬಾರದು. ಕಳೆದ ಬಾರಿ ಚುನಾವಣೆಯಂತೆ ಪಾರದರ್ಶಕವಾಗಿ ನಡೆಸಲು ಕೈಜೋಡಿಸಬೇಕು" ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+