Sandur By Election: ಸಂಡೂರು ಉಪ ಚುನಾವಣೆ ಮತ ಎಣಿಕೆ, ಎಸ್‌ಪಿ ಪರಿಶೀಲನೆ
ಬಳ್ಳಾರಿ, ನವೆಂಬರ್ 21: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನವೆಂಬರ್ 23ರಂದು ನಡೆಯಲಿದೆ. ಮತದಾನ ಸುಸೂತ್ರವಾಗಿ, ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, 6 ಅಭ್ಯರ್ಥಿಗಳ ಭವಿಷ್ಯ ಇವಿನಂನಲ್ಲಿ ಭದ್ರವಾಗಿದೆ. ಯಾರಿಗೆ ಗೆಲುವು ಎಂದು ಲೆಕ್ಕಾಚಾರಗಳು ನಡೆಯುತ್ತಿದ್ದು, ಬೆಟ್ಟಿಂಗ್ ಸಹ ನಡೆಯುತ್ತಿದೆ. 2023ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಡೂರು ಕ್ಷೇತ್ರದಲ್ಲಿ ಜಯಗಳಿಸಿದ್ದರು.
ಸಂಡೂರು ಉಪ ಚುನಾವಣೆಯ ಇವಿಎಂಗಳನ್ನು ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಕ್ಷೇತ್ರದ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನವೆಂಬರ್ 13ರ ಬುಧವಾರ ಮತದಾನ ನಡೆದಿದ್ದು, ಒಟ್ಟು ಶೇ 76.24 ರಷ್ಟು ಮತದಾನವಾಗಿತ್ತು.

ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಮತ ಎಣಿಕೆ ನಡೆಯಲಿದೆ. ಬಳ್ಳಾರಿ ಎಸ್‌ಪಿ ಶೋಭಾ ರಾಣಿ ವಿ. ಜೆ. ಅವರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಮತದಾನದ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
8 ಗಂಟೆಗೆ ಮತ ಎಣಿಕೆ ಆರಂಭ: ಸಂಡೂರು ಉಪ ಚುನಾವಣೆ ಕಣದಲ್ಲಿ 6 ಅಭ್ಯರ್ಥಿಗಳಿದ್ದಾರೆ. ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಕಾಂಗ್ರೆಸ್‌ನಿಂದ ಈ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ ಪ್ರಮುಖ ಅಭ್ಯರ್ಥಿಗಳು. ಉಳಿದಂತೆ ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ಕಣದಲ್ಲಿದ್ದಾರೆ.
ಮತ ಎಣಿಕೆಯು ನವೆಂಬರ್ 23ರ ಶನಿವಾರ ಬೆಳಗ್ಗೆ 8ರಿಂದ ಆರಂಭವಾಗಲಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಚುನಾವಣಾ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಮತಯಂತ್ರಗಳನ್ನು ನಿಗದಿಪಡಿಸಿರುವ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ. ಮತಯಂತ್ರಗಳು ಇರುವ ಸ್ಟ್ರಾಂಗ್ ರೂಂ ಬಾಗಿಲಿಗೆ ಬೀಗ ಹಾಕಿ, ಮೊಹರು ಹಾಕಲಾಗಿದೆ. ಬಾಗಿಲನ್ನು ದಪ್ಪ ಹಲಗೆಯ ಮೂಲಕ ಸಂಪೂರ್ಣ ಮುಚ್ಚಿ ಸೀಲ್ ಮಾಡಲಾಗಿದೆ.
ಮತ ಎಣಿಕೆ ಕೇಂದ್ರ ಸುತ್ತಲೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆ ಕಲ್ಪಿಸಲಾಗಿದೆ. ಉಪ ಚುನಾವಣೆ ಮತಎಣಿಕೆ ನಡೆಯುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 22ರ ಸಂಜೆ 6 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.
ಉಪ ಚುನಾವಣೆಯ ಮತ ಎಣಿಕೆಯನ್ನು ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನವೆಂಬರ್ 22ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 22ರ ಸಂಜೆ 6 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.
-
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications