Sandur By Election: ಸಂಡೂರು ಉಪ ಚುನಾವಣೆ, ಕ್ಷೇತ್ರದ ರಾಜಕೀಯ ಇತಿಹಾಸ
ಬಳ್ಳಾರಿ, ನವೆಂಬರ್ 13: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ 2024ರ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಶಾಸಕ ಇ. ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕಾಂಗ್ರೆಸ್ ಇ. ತುಕಾರಾಂ ಪತ್ನಿ ಇ. ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಮಾಡಿದೆ.
ಸಂಡೂರು ಕ್ಷೇತ್ರದಲ್ಲಿ 2,36,100 ಮತದಾರರು ಹಕ್ಕು ಚಲಾವಣೆ ಮಾಡುವ ಅಧಿಕಾರ ಹೊಂದಿದ್ದಾರೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಕ್ಷೇತ್ರದಲ್ಲಿ 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

ಬಳ್ಳಾರಿ ಜಿಲ್ಲೆಯ ಸಂಡೂರು ಆಂಧ್ರ ಪ್ರದೇಶದ ಜೊತೆ ಗಡಿಯನ್ನು ಹಂಚಿಕೊಂಡಿರುವ ಕ್ಷೇತ್ರ. ಸಾಮಾನ್ಯ ಕ್ಷೇತ್ರವಾಗಿದ್ದ ಇದು 2008ರ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಗಿ ಬದಲಾಗಿದೆ. ಹಾಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ತವರು ಕ್ಷೇತ್ರವಿದು. 2004ರಲ್ಲಿ ಜೆಡಿಎಸ್‌ನ ಸಂತೋಷ್ ಲಾಡ್ 65,600 ಮತ ಪಡೆದು ಕಾಂಗ್ರೆಸ್ ಅಭ್ಯರ್ಥಿ, ರಾಜಮನೆತನದ ವೆಂಕಟರಾವ್ ಘೋರ್ಪಡೆ ಸೋಲಿಸಿದ್ದರು.
ಕಾಂಗ್ರೆಸ್ ಪ್ರಾಬಲ್ಯದ ಕ್ಷೇತ್ರ: ಸಂಡೂರು ಕಾಂಗ್ರೆಸ್ ಪ್ರಾಬಲ್ಯ ಇರುವ ಕ್ಷೇತ್ರ ಎಂದು ಅಂಕಿ ಅಂಶಗಳು ಹೇಳುತ್ತವೆ. 2008ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇ. ತುಕಾರಾಂ 49,535 ಮತಗಳನ್ನು ಪಡೆದು, ಬಿಜೆಪಿಯ ಟಿ. ನಾಗರಾಜ್ (28,816 ಮತ) ಸೋಲಿಸಿದ್ದರು.
2013ರಲ್ಲಿ ಮತ್ತೆ ಇ. ತುಕಾರಾಂ 62,246 ಮತಗಳನ್ನು ಪಡೆದು, ಜೆಡಿಎಸ್‌ನ ಧನಂಜಯ ಆರ್. (27,615 ಮತ) ಸೋಲಿಸಿದರು. 2018ರ ಚುನಾವಣೆಯಲ್ಲಿ 78,106 ಮತಗಳನ್ನು ಪಡೆದು, ಇ. ತುಕರಾಂ ಬಿಜೆಪಿಯ ಡಿ. ರಾಘವೇಂದ್ರ (64,096 ಮತ) ಸೋಲಿಸಿದ್ದರು. 2023ರಲ್ಲಿ ಇ. ತುಕಾರಾಂ 85,223 ಮತಗಳನ್ನು ಪಡೆದು ಬಿಜೆಪಿಯ ಶಿಲ್ಪಾ ರಾಘವೇಂದ್ರ (49,701 ಮತ) ಸೋಲಿಸಿದ್ದಾರೆ.
ಬಿಜೆಪಿ ಕ್ಷೇತ್ರದಲ್ಲಿ 2023ರಲ್ಲಿ 49,701, 2018ರಲ್ಲಿ 64,096, 2013ರಲ್ಲಿ 3,314, 2008ರಲ್ಲಿ 28,816 ಮತಗಳನ್ನು ಗಳಿಸಿದೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿ ಈ ಬಾರಿ ಜಯಗಳಿಸುವುದೇ? ಎಂದು ಕಾದು ನೋಡಬೇಕಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳಬೇಕು ಎಂದು ಭರ್ಜರಿ ಪ್ರಚಾರವನ್ನು ನಡೆಸಿದ್ದಾರೆ.
ಉಪ ಚುನಾವಣೆಯಲ್ಲಿ ಇ. ಅನ್ನಪೂರ್ಣಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ನಾಯಕರಲ್ಲಿ ಅಸಮಾಧಾನವಿತ್ತು. ಆದರೆ ಸಚಿವ ಸಂತೋಷ್ ಲಾಡ್ ಅವುಗಳನ್ನು ಬಗೆಹರಿಸಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.
ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿಯೇ ಸುಪ್ರೀಂಕೋರ್ಟ್ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಇದ್ದ ನಿರ್ಬಂಧ ಸಡಿಲಿಸಿತ್ತು. ಆದ್ದರಿಂದ ಜನಾರ್ದನ ರೆಡ್ಡಿ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡರು. ಸಂಡೂರಿನಲ್ಲಿ ಬಾಡಿಗೆ ಮನೆ ಮಾಡಿ, ಅಲ್ಲಿಯೇ ವಾಸ್ತವ್ಯ ಹೂಡಿ ಪ್ರಚಾರದಲ್ಲಿ ತೊಡಗಿದ್ದರು.
ಬಳ್ಳಾರಿಯಲ್ಲಿ ಇ. ತುಕಾರಾಂ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಬಿ. ಶ್ರೀರಾಮುಲು ಸಹ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಆದ್ದರಿಂದ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications