Get Updates
Get notified of breaking news, exclusive insights, and must-see stories!

Sandur By Election: ಸಂಡೂರು ಉಪ ಚುನಾವಣೆ ತಯಾರಿ ಹೇಗಿದೆ?

ಬಳ್ಳಾರಿ, ನವೆಂಬರ್ 12: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ 2024ರ ಮತದಾನ ನವೆಂಬರ್ 13ರ ಬುಧವಾರ ನಡೆಯಲಿದೆ. ಮಸ್ಟರಿಂಗ್ ಕಾರ್ಯ ಪೂರ್ಣಗೊಂಡಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳು, ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರು ಮತಗಟ್ಟೆಗಳತ್ತ ಪ್ರಯಾಣ ಆರಂಭಿಸಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ 2,36,100 ಮತದಾರರು ಇದ್ದು, 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನದ ಕಾರ್ಯಕ್ಕೆ 1,215 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ.

ಮಂಗಳವಾರ ಸಂಡೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್‌ಪಿ ಶೋಭಾರಾಣಿ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ, ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ಮತದಾನ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿ/ ಸಿಬ್ಬಂದಿಗಳನ್ನು ಬೀಳ್ಕೊಟ್ಟರು.

Sandur By Election 2024 Voting On November 13

ಉಪ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಸೋಮವಾರ ಸಂಜೆ 6 ಗಂಟೆಗೆ ಅಂತ್ಯವಾಗಿದೆ. ಈಗ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು.

ಸೋಮವಾರ ಸಂಜೆ 6 ಗಂಟೆಯ ನಂತರ ನವೆಂಬರ್ 14ರ ಸಂಜೆ 6 ಗಂಟೆಯವರೆಗೆ ಸಂಡೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ಅಡಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. 5ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ.

ಮತಗಟ್ಟೆ, ಮತದಾರರ ವಿವರ: ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 2,36,100 ಮತದಾರರು ಇದ್ದಾರೆ. ಇವರಲ್ಲಿ 1,17,789 ಪುರುಷರು, 1,18,282 ಮಹಿಳಾ ಮತದಾರರು ಹಾಗೂ 29 ಅಲ್ಪಸಂಖ್ಯಾತ ಲಿಂಗತ್ವ ಮತದಾರರು ಇದ್ದಾರೆ. ಮತದಾನದಕ್ಕಾಗಿ ಒಟ್ಟು 253 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

ಉಪ ಚುನಾವಣೆ ಅಂಗವಾಗಿ ಶಾಂತಿಯುತ ಹಾಗೂ ಚುನಾವಣಾ ಆಯೋಗದ ನಿಯಮಾನುಸಾರ ಮತದಾನ ನಡೆಸಲು ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲು 304 ಮತಗಟ್ಟೆ ಅಧಿಕಾರಿಗಳು, 304 ಸಹಾಯಕ ಅಧಿಕಾರಿಗಳು, 608 ಮತದಾನ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,215 ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಪ್ರತಿ ಮತಗಟ್ಟೆಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ.

ವೇತನ ಸಹಿತ ರಜೆ ಘೋಷಣೆ: ಸಂಡೂರು ಉಪ ಚುನಾವಣೆ ಹಿನ್ನಲೆಯಲ್ಲಿ ನವೆಂಬರ್ 13ರಂದು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ಇನ್ನಿತರೆ ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೆ ಸೀಮಿತವಾದಂತೆ ರಜೆ ನೀಡಲಾಗಿದೆ.

ಮತದಾನ ಮಾಡಲು ನೆಗೋಶಬಲ್ ಇನ್‌ಸ್ಟ್ರುಮೆಂಟ್‌ ಆಕ್ಟ್ 1881, ಕಲಂ 135ಬಿ ಅಡಿ ಎಲ್ಲಾ ಉಪಬಂಧಗಳನ್ವಯ ಒಂದು ದಿನದ ವೇತನ ಸಹಿತ ರಜೆಯನ್ನು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶಿಸಿದ್ದಾರೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಹಾಗೂ ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+