Sandur By Election Result: ಸಂಡೂರಿನಲ್ಲಿ ಯಾರಿಗೆ ಎಷ್ಟು ಮತ, ಅಪ್‌ಡೇಟ್‌

ಬಳ್ಳಾರಿ, ನವೆಂಬರ್ 23: ಸಂಡೂರು ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣಾ ಕಣದಲ್ಲಿ 6 ಅಭ್ಯರ್ಥಿಗಳಿದ್ದು ಸದ್ಯದ ಮಾಹಿತಿಯಂತೆ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಬಂಗಾರ ಹನುಮಂತ ಮತ್ತು ಕಾಂಗ್ರೆಸ್‌ನ ಇ. ಅನ್ನಪೂರ್ಣ. ಸಂಡೂರು ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಶನಿವಾರ ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ. ಸಮಯ 10.17ರ ಮಾಹಿತಿಯಂತೆ ಕಾಂಗ್ರೆಸ್‌ನ ಇ. ಅನ್ನಪೂರ್ಣ 38,373 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಬಂಗಾರ ಹನುಮಂತ 38,340 ಮತಗಳನ್ನು ಪಡೆದ್ದಾರೆ.

Sandur By Election Results 2024 Congress Leading Recent Trend

ಸಂಡೂರು ಕ್ಷೇತ್ರದಲ್ಲಿ ನವೆಂಬರ್ 13ರಂದು 253 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಶೇ 76.24 ರಷ್ಟು ಮತದಾನವಾಗಿತ್ತು. ಅಂಚೆ ಮತಗಳ ಎಣಿಕೆಯಿಂದಲೂ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ. ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದರು.

ಚುನಾವಣಾ ಕಣದಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ, ಬಿಜೆಪಿಯ ಬಂಗಾರ ಹನುಮಂತ. ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಕಣದಲ್ಲಿದ್ದಾರೆ.

ಉಪ ಚುನಾವಣೆ ದಿನಾಂಕ ಘೋಷಣೆಗೂ ಮೊದಲು ಸುಪ್ರೀಂಕೋರ್ಟ್ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಬಳ್ಳಾರಿ ಭೇಟಿಗೆ ಇದ್ದ ನಿರ್ಬಂಧ ಸಡಿಲಿಸಿತು. ಆದ್ದರಿಂದ ಅವರು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡರು.

ಇ. ತುಕಾರಾಂ ಸಂಡೂರು ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನಾಯಕರ ಬಳಿ ಉಪ ಚುನಾವಣೆಗೆ ಪತ್ನಿಗೆ ಟಿಕೆಟ್ ಕೊಡಿಸುವಲ್ಲಿ ಅವರು ಸಫಲವಾಗಿದ್ದಾರೆ. ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಅವರೇ ತೆಗೆದುಕೊಂಡಿದ್ದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸಿ ಪ್ರಚಾರವನ್ನು ನಡೆಸಿದ್ದಾರೆ.

ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಸಂಡೂರು ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದ್ದರಿಂದ ಸಂಡೂರು ಕದನ ಕುತೂಹಲಕ್ಕೆ ಕಾರಣವಾಗಿದೆ. ಇವಿಎಂ ಮತಗಳ ಎಣಿಕೆ ಕಾರ್ಯ ನಡೆಯುತ್ತಿದ್ದು, 6 ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ.

ಬಿಜೆಪಿಯ ಬಂಗಾರ ಹನುಮಂತ ಪರವಾಗಿ ಬಿ. ಶ್ರೀರಾಮುಲು, ಜನಾರ್ದನ ರೆಡ್ಡಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯುತ್ತಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

ಸಂಡೂರು ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳು?

* ಕಾಂಗ್ರೆಸ್‌ನ ಇ. ಅನ್ನಪೂರ್ಣ - 50692
* ಬಿಜೆಪಿಯ ಬಂಗಾರ ಹನುಮಂತ - 47204
* ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ - 298
* ಪಕ್ಷೇತರ ಎನ್. ವೆಂಕಣ್ಣ - 219
* ಪಕ್ಷೇತರ ಟಿ. ಎರ್ರಿಸ್ವಾಮಿ - 117
* ಪ್ಷೇತರ ಟಿ. ಎಂ. ಮಾರುತಿ - 106 ಮತಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+