Get Updates
Get notified of breaking news, exclusive insights, and must-see stories!

ಸಂಡೂರು ಉಪ ಚುನಾವಣೆ: 7 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರ ಸಲ್ಲಿಕೆ

ಬಳ್ಳಾರಿ, ಅಕ್ಟೋಬರ್ 26: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. ತಿಳಿಸಿದ್ದಾರೆ.

ಸಂಡೂರು ಉಪ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್. ವೆಂಕಣ್ಣ, ಟಿ. ಎರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ. ಎಂ. ಮಾರುತಿ ಒಂದೊಂದು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ. ಅನ್ನಪೂರ್ಣ ಅವರು 4 ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು 4 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಜಿನಪ್ಪ ಒಂದು ನಾಮಪತ್ರ ಸಲ್ಲಿಸಿದ್ದಾರೆ.

Sandur By Elections 2024 7 Candidates Field Nominations

ಚುನಾವಣಾ ವೀಕ್ಷಕರ ನೇಮಕ: ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಡಾ. ದಿವ್ಯಾ ಎಸ್ ಅಯ್ಯರ್ ಅವರನ್ನು ಭಾರತೀಯ ಚುನಾವಣಾ ಆಯೋಗ ನೇಮಿಸಿದೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿನ ಚುನಾವಣೆಗೆ ಕೈಗೊಂಡಿರುವ ವ್ಯವಸ್ಥೆ ಮತ್ತು ನೀತಿ ಸಂಹಿತೆ ಉಲ್ಲಂಘನೆಗಳನ್ನು ಪರಿಶೀಲಿಸಲು ಡಾ. ದಿವ್ಯಾ ಎಸ್ ಅಯ್ಯರ್ ನೇಮಕ ಮಾಡಲಾಗಿದೆ. ಸಾಮಾನ್ಯ ವೀಕ್ಷಕರಾದ ಅವರು ಸಂಡೂರಿನ ಹೊಸಪೇಟೆ ರಸ್ತೆಯ ಸರ್ಕ್ಯೂಟ್ ಹೌಸ್‌ನ ಕೊಠಡಿ ಸಂಖ್ಯೆ 1 ರಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸಾರ್ವಜನಿಕರು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷದ ಸದಸ್ಯರು ಯಾವುದೇ ಚುನಾವಣಾ ಸಂಬಂಧಿಸಿದ ದೂರುಗಳಿದ್ದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 4 ರಿಂದ 5 ರವರೆಗೆ ನಿಗದಿತ ಸ್ಥಳ ಮತ್ತು ಸಮಯದಲ್ಲಿ ಸಾಮಾನ್ಯ ವೀಕ್ಷಕರನ್ನು ಭೇಟಿ ಮಾಡಬಹುದು ಅಥವಾ 9141142756 ಸಂಖ್ಯೆಗೆ ಕರೆ ಮಾಡಬಹುದು.

ಸಿಬ್ಬಂದಿಗಳು ರಜೆ ಮೇಲೆ ತೆರಳುವಂತಿಲ್ಲ: ಸಂಡೂರು ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಭಂದಿಯವರಿಗೆ ರಜೆ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿರುವುದರಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ತಿಳಿಸಲಾಗಿದೆ.

ಉಪಚುನಾವಣೆಯಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ಆ ಕ್ಷೇತ್ರದ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪೋಸ್ಟಲ್ ಬ್ಯಾಲೆಟ್‌ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆಯನ್ನು ನಡೆಸಿ, ಸೂಚನೆಗಳನ್ನು ನೀಡಲಾಗಿದೆ.

ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನದ ದಿನದಂದು ತಮ್ಮ ಕರ್ತವ್ಯದ ಕಾರಣದಿಂದಾಗಿ ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಈ ಅವಕಾಶ ಒದಗಿಸಲಾಗುತ್ತದೆ. ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ಜೆಸ್ಕಾಂ, ಬಿಎಸ್‌ಎನ್‌ಎಲ್, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಟ್ರಾಫಿಕ್ ಪೊಲೀಸ್, ಆಂಬುಲೆನ್ಸ್ ಸೇವೆಯಲ್ಲಿರುವರು, ಕಾರಾಗೃಹ ಸೇರಿದಂತೆ 16 ಇತರೆ ಸೇವೆಗಳಡಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಈ ಮಾದರಿ ಮತದಾನ ಮಾಡಬಹುದು.

ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರಿಗೆ ಮತದಾನ ದಿನದ ಬದಲಿಗೆ ಮತದಾನ ದಿನಕ್ಕೂ ಪೂರ್ವದಲ್ಲಿಯೇ ಫೆಸಿಲಿಟೇಶನ್ ಸೆಂಟರ್‌ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡುವಂತಹ ಅವಕಾಶ ನೀಡಲಾಗುತ್ತದೆ.

ಅಗತ್ಯ ಸೇವೆಗಳಡಿ ಸೇವೆ ಸಲ್ಲಿಸುತ್ತಿರುವ ನೌಕರರು ಫೆಸಿಲಿಟೇಶನ್ ಸೆಂಟರ್‌ನಲ್ಲಿ ಮತದಾನ ಮಾಡಲು ಹಾಗೂ ಪೋಸ್ಟಲ್ ಬ್ಯಾಲಟ್ ಮತದಾನದ ಸೇವೆ ಪಡೆಯಲು, ಸಂಬಂಧಿಸಿದ ಇಲಾಖೆಯಿಂದ ನಮೂನೆ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು. ಬಳಿಕ ಭರ್ತಿ ಮಾಡಿದ ನಮೂನೆಯನ್ನು ಆ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ನೋಡಲ್ ಅಧಿಕಾರಿಗಳಿಗೆ ಆಯಾ ಇಲಾಖಾ ಅಧಿಕಾರಿಗಳು ಸಲ್ಲಿಸಬೇಕು. 12 ಡಿ ನಮೂನೆಯನ್ನು ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಫೆಸಿಲಿಟೇಶನ್ ಸೆಂಟರ್‌ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+