ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2 ದಿನ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

|
Google Oneindia Kannada News

ಬಳ್ಳಾರಿ, ಆಗಸ್ಟ್ 28 : ಮಾಜಿ ಸಚಿವ ಜನಾರ್ದನ ರೆಡ್ಡಿ ಎರಡು ದಿನಗಳ ಕಾಲ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಆಗಸ್ಟ್ 30 ಮತ್ತು 31ರಂದು ಅವರು ಬಳ್ಳಾರಿಗೆ ಭೇಟಿ ನೀಡಲಿದ್ದಾರೆ.

Recommended Video

ಬೆಂಗಳೂರಿನಲ್ಲಿ ನಡೆಯಲಿದೆ Aero India 2021| Oneindia Kannada

ಆರೋಗ್ಯ ಸಚಿವ ಬಿ. ಶ್ರೀರಾಮುಲು ತಾಯಿ ಹೊನ್ನೂರಮ್ಮ ವಿಧಿವಶರಾಗಿದ್ದಾರೆ. ಅವರ ಪುಣ್ಯತಿಥಿಯ ಕಾರ್ಯದಲ್ಲಿ ಜನಾರ್ದನ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ಎರಡು ದಿನಗಳ ಕಾಲ ಬಳ್ಳಾರಿಯ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

'ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು': ಗಾಲಿ ಜನಾರ್ದನ ರೆಡ್ಡಿ ಕಣ್ಣೀರು'ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು': ಗಾಲಿ ಜನಾರ್ದನ ರೆಡ್ಡಿ ಕಣ್ಣೀರು

ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಜನಾರ್ದನ ರೆಡ್ಡಿ ಬಳ್ಳಾರಿಗೆ ಎರಡು ದಿನ ಭೇಟಿ ನೀಡಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ನ್ಯಾಯಾಲಯ ಒಪ್ಪಿಗೆ ನೀಡಿದೆ.

ಕೊರೊನಾವೈರಸ್ ನಿಂದ ಗುಣಮುಖರಾದ ಆರೋಗ್ಯ ಸಚಿವ ಶ್ರೀರಾಮುಲುಕೊರೊನಾವೈರಸ್ ನಿಂದ ಗುಣಮುಖರಾದ ಆರೋಗ್ಯ ಸಚಿವ ಶ್ರೀರಾಮುಲು

SC Allowed Janardhana Reddy To Visit Ballari On August 30 And 31

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ನೀಡುವಾಗ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಷರತ್ತು ಹಾಕಿತ್ತು. ಆದ್ದರಿಂದ ಜನಾರ್ದನ ರೆಡ್ಡಿ ಬೆಂಗಳೂರಿನ ನಿವಾಸದಲ್ಲಿಯೇ ಇದ್ದಾರೆ.

ಜನಾರ್ದನ ರೆಡ್ಡಿ ಅಂದು ಕಂಡ ಕನಸು ಈಗ ನನಸು ಜನಾರ್ದನ ರೆಡ್ಡಿ ಅಂದು ಕಂಡ ಕನಸು ಈಗ ನನಸು

ಬಳ್ಳಾರಿಗೆ ಭೇಟಿ ನೀಡಬೇಕಾದಾಗ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳುತ್ತಾರೆ. ಈಗ ಶ್ರೀರಾಮುಲು ತಾಯಿ ಪುಣ್ಯ ತಿಥಿಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಪಡೆದುಕೊಂಡಿದ್ದಾರೆ.

ಪೋಸ್ಟ್ ಹಾಕಿದ್ದರು : ಜನಾರ್ದನ ರೆಡ್ಡಿ ಆಪ್ತ ಗೆಳೆಯ ಬಿ. ಶ್ರೀರಾಮುಲು ತಾಯಿ ಹೊನ್ನೂರಮ್ಮ ವಿಧಿವಶರಾದಾಗ ಜನಾರ್ದನ ರೆಡ್ಡಿ ಫೇಸ್‌ ಬುಕ್ ಪೋಸ್ಟ್ ಹಾಕಿದ್ದರು. 'ಶ್ರೀರಾಮುಲು ಹಾಗೂ ನನ್ನನ್ನು ಇಬ್ಬರನ್ನು ತನ್ನ ಮಕ್ಕಳ ಹಾಗೆ ನೋಡಿಕೊಂಡಿದ್ದರು. ನಾವು ಇಬ್ಬರು ಬಾಲ್ಯ ಸ್ನೇಹಿತರಾದ ಕಾರಣ ನಾನು ಕಂಡಂತೆ ನನಗೆ ಅವರು ಶ್ರೀರಾಮುಲುಗಿಂತಲೂ ಹೆಚ್ಚಿನ ಪ್ರೀತಿಯನ್ನು ಕೊಟ್ಟು ಬೆಳೆಸಿದ್ದರು' ಎಂದು ಬಣ್ಣಿಸಿದ್ದರು.

"ನಮ್ಮನ್ನು ಬೆಳೆಸಿದ ತಾಯಿ ಇಂದು ಇಹಲೋಕ ತ್ಯಜಿಸಿದರು ಎಂಬ ಸುದ್ದಿಯನ್ನು ಕೇಳಿ, ಮಾತು ಬಾರದಾಗಿ, ದು:ಖ ತಡೆಯಲಾಗುತ್ತಿಲ್ಲ ಕಣ್ಣಂಚಿನಿಂದ ನೀರು ತನ್ನಷ್ಟಕ್ಕೆ ತಾನೇ ಹರಿಯುತ್ತಿದೆ. ಈ ವಿಷಯ ಕೇಳಿ ಇಡಿ ನಮ್ಮ ಕುಟುಂಬದಲ್ಲಿ ದು:ಖ ಆವರಿಸಿದೆ" ಎಂದು ಸಂತಾಪ ಸೂಚಿಸಿದ್ದರು.

English summary
Supreme Court of India allowed Janardhana Reddy to visit Ballari, Karnataka on August 30 and 31, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X