• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ: ಹಿರಿಯ ಪತ್ರಕರ್ತ ಶ್ಯಾಮಸುಂದರ್ ನಿಧನ; ಹಲವರಿಂದ ಸಂತಾಪ

|

ಬಳ್ಳಾರಿ, ಅಕ್ಟೋಬರ್ 20: "ದಿ ಹಿಂದು' ಪತ್ರಿಕೆ ವರದಿಗಾರರಾಗಿ ಕೆಲಸ ಮಾಡಿದ ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ

ಶ್ಯಾಮ ಸುಂದರ್(70) ಅವರು ಹೃದಯಾಘಾತದಿಂದ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತ ಶ್ಯಾಮ ಸುಂದರ್ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದು, ಶ್ಯಾಮಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕೊರೊನಾ ವೈರಸ್ ನಿಂದ ಮೈಸೂರಿನ ಯುವ ಪತ್ರಕರ್ತ ನಿಧನ

ಬಳ್ಳಾರಿಯ ಬಿಕೆಎಸ್ ಆಸ್ಪತ್ರೆಯಲ್ಲಿ ಅ.20ರ ಮಂಗಳವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಬಳ್ಳಾರಿಯ ಮೋಕಾ ರಸ್ತೆಯಲ್ಲಿರುವ ಬಗೀಚಾ ಹೋಟೆಲ್ ಹಿಂದುಗಡೆಯ ಕೆ.ಹೆಚ್.ಬಿ ಕಾಲೊನಿಯ ನಿವಾಸಿಯಾಗಿದ್ದ ಹಿರಿಯ ಪತ್ರಕರ್ತ ಶಾಮಸುಂದರ್ ಅವರು, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಅವರನ್ನು ಚಿಕಿತ್ಸೆಗೆಂದು ಬಿಕೆಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ, ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿತ್ತು ಎಂದು ಹೇಳಲಾಗಿದೆ.

ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಶ್ಯಾಮ್ ಸುಂದರ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂಗ್ಲಿಷ್ ಭಾಷೆಯಲ್ಲಿ ಪ್ರೌಢಿಮೆ ಹೊಂದಿದ್ದ ಶ್ಯಾಮ್ ಸುಂದರ್ ಅವರು, ದಿ ಹಿಂದು ಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡಿದ್ದರು. ಇವರ ವರದಿಗಾರಿಕೆ ಮೆಚ್ಚಿ ರಾಜ್ಯ ಸರ್ಕಾರವು ಮಾಧ್ಯಮ ವಿಭಾಗದಲ್ಲಿ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಇಂತಹ ವಿರಳ ಪತ್ರಕರ್ತರನ್ನು ಕಳೆದುಕೊಂಡಿದ್ದೇವೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಮತ್ತು ಅವರ ಮಾಧ್ಯಮದ ಸಹವರ್ತಿಗಳಿಗೆ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಸಚಿವರು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

English summary
Senior journalist, recipient of Rajyotsava Awardee Shyama Sundar (70) died at a private hospital in Ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X