ಹಂಪಿ ಉತ್ಸವದ ಲಾಂಛನ ಬಿಡುಗಡೆ; ಉತ್ಸವದ ವಿಶೇಷತೆಗಳು

ವಿಜಯನಗರ, ಜನವರಿ 14: ವಿಜಯನಗರ ಜಿಲ್ಲೆಯ ಹಂಪಿಯ ಭವ್ಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಯಲಿದೆ. ಬರ ಪರಿಸ್ಥಿತಿ ಹಿನ್ನಲೆಯಲ್ಲಿ ನವೆಂಬರ್‌ನಲ್ಲಿ ನಡೆಯಬೇಕಿದ್ದ ಉತ್ಸವವನ್ನು ಫೆಬ್ರವರಿಯಲ್ಲಿ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವದ ಲಾಂಛನ ಬಿಡುಗಡೆ ಮಾಡಿದರು. ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಮಹದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Siddaramaiah Released Logo Of Hampi Utsav

ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಫೆಬ್ರವರಿ 2, 3 ಮತ್ತು 4ರಂದು ಹಂಪಿ ಉತ್ಸವ ನಡೆಯಲಿದೆ. ಯುನೆಸ್ಕೋ ಪಾರಂಪರಿಕ ತಾಣವಾದ ಹಂಪಿಯಲ್ಲಿ ಪ್ರತಿ ವರ್ಷ ವಿಜಯ ನಗರ ಸಾಮ್ರಾಜ್ಯ ಮತ್ತು ಹಂಪಿಯ ಇತಿಹಾಸವನ್ನು ಹೇಳುವ ಹಂಪಿ ಉತ್ಸವವನ್ನು ಮೂರು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ.

ವಿಜಯನಗರದ ಜಿಲ್ಲಾಧಿಕಾರಿ ಎಂ. ಎಸ್. ದಿವಾಕರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಅಪರ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಇತರ ಅಧಿಕಾರಿಗಳ ಜೊತೆ ಹಂಪಿ ಉತ್ಸವದ ತಯಾರಿ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನವೆಂಬರ್‌ನಲ್ಲಿ ಹಂಪಿ ಉತ್ಸವ ನಿಗದಿಯಾಗಿತ್ತು. ಆದರೆ ಬರ ಪರಿಸ್ಥಿತಿ ಕಾರಣ ಫೆಬ್ರವರಿಯಲ್ಲಿ ಆಚರಣೆ ಮಾಡಲಾಗುತ್ತಿದೆ.

ಹಂಪಿ ಉತ್ಸವಕ್ಕಾಗಿ ವಿಜಯನಗರ ಜಿಲ್ಲಾಡಳಿತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಸರಳವಾಗಿ ಈ ಬಾರಿಯ ಉತ್ಸವವನ್ನು ನಡೆಸಲು ಜಿಲ್ಲಾಡಳಿತ ಜನಪ್ರತಿನಿಧಿಗಳು, ಜನರ ಸಲಹೆಗಳನ್ನು ಸಹ ಪಡೆದಿದೆ.

ಈಗಾಗಲೇ ಉತ್ಸವದ ಯಶಸ್ಸಿಗೆ ಅಗತ್ಯ ಯೋಜನೆ ರೂಪಿಸಲಾಗಿದೆ. ವಿವಿಧ ಸಮಿತಿಗಳನ್ನು ರಚನೆ ಮಾಡಿ ಜವಾಬ್ದಾರಿ ಹಂಚಿಕೆ ಮಾಡಲು ಸಹ ತೀರ್ಮಾನ ಮಾಡಲಾಗಿದೆ. ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸರಳವಾಗಿ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತದೆ.

ನಾಲ್ಕು ವೇದಿಕೆ ನಿರ್ಮಾಣ; ಮುಖ್ಯ ಕಾರ್ಯಕ್ರಮದ ವೇದಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಒಟ್ಟು ನಾಲ್ಕು ವೇದಿಕೆಗಳನ್ನು ಹಂಪಿ ಉತ್ಸವಕ್ಕಾಗಿ ನಿರ್ಮಾಣ ಮಾಡಲಾಗುತ್ತದೆ. ಹಂಪಿಯ ದೇವಾಲಯಗಳು, ಸ್ಮಾರಕಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗುತ್ತದೆ.

ಎಲ್ಲಾ ವರ್ಗದ ಜನರನ್ನು ಸಹ ಹಂಪಿ ಉತ್ಸವಕ್ಕೆ ಆಕರ್ಷಿಸಲು ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ತುಂಗಾರತಿ, ಮಕ್ಕಳಿಗಾಗಿ ವಿಶೇಷ ಸ್ಪರ್ಧೆಗಳು, ರೈತರಿಗಾಗಿ ಕೃಷಿ ವಸ್ತುಗಳ ಮಾರಾಟ, ಪ್ರದರ್ಶನವನ್ನು ಸಹ ಆಯೋಜನೆ ಮಾಡಲಾಗುತ್ತದೆ.

ಜಿಲ್ಲಾಧಿಕಾರಿ ಎಂ. ಎಸ್. ದಿವಾಕರ್ ಹಂಪಿ ಉತ್ಸವದ ಹಿನ್ನಲೆಯಲ್ಲಿ ವಿವಿಧ ಅಧಿಕಾರಿಗಳ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೋಟೆಲ್‌ ಮಾಲೀಕರೊಂದಿಗೆ ಹಂಪಿ ಉತ್ಸವ ಸಿದ್ದತೆಯ ಬಗ್ಗೆಯೂ ಸಭೆ ನಡೆಸಲಾಗಿದೆ.

ಪ್ರತಿ ವರ್ಷದಂತೆ ಈ ಬಾರಿಯ ಹಂಪಿ ಉತ್ಸವದಲ್ಲಿಯೂ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕುಸ್ತಿ ಸೇರಿದಂತೆ ವಿವಿಧ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ. ಹಂಪಿ ಉತ್ಸವದ ಕುರಿತು ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ನಿರಂತರ ಪ್ರಚಾರ ಕೈಗೊಂಡು ಉತ್ಸವವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಂಪಿ ಉತ್ಸವಕ್ಕೆ ಗ್ರಾಮೀಣ ಭಾಗದ ಜನರನ್ನು ಕರೆತರಲು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ ಉತ್ಸವ ಉದ್ಘಾಟಿಸಲಿದ್ದಾರೆ. ಉತ್ಸವಕ್ಕೆ ಪೂರ್ವಭಾವಿಯಾಗಿ ಹಲವು ಸ್ಪರ್ಧೆಗಳನ್ನು ಆಯೋಜಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+