ಬಳ್ಳಾರಿ; ತಹಶೀಲ್ದಾರ್ ಗೃಹ ಕಚೇರಿಯಲ್ಲಿ ಗೃಹಿಣಿ ಆತ್ಮಹತ್ಯೆ
ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಹಸೀಲ್ದಾರ ಗೃಹ ಕಚೇರಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸಿರಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಬಿ. ಕೂಡ್ಲಿಗಿ ಅವರ ಪತ್ನಿ ಶಂಕಮ್ಮ ಆತ್ಮಹತ್ಯೆ ಮಾಡಿಕೊಂಡವರು. ತಹಶೀಲ್ದಾರ್ ಸರ್ಕಾರಿ ಗೃಹ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಶಂಕ್ರಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸತೀಶ್ ಬಿ. ಕೂಡ್ಲಿಗಿ ಅವರು ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯದ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾವಣೆಯಾಗಿದ್ದರು. ಆದರೆ, ಸರ್ಕಾರಿ ನಿವಾಸವನ್ನು ಖಾಲಿ ಮಾಡಿರಲಿಲ್ಲ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶಂಕ್ರಮ್ಮ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರಗುಪ್ಪ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಸಹ ಸ್ಥಳಕ್ಕೆ ಆಗಮಿಸಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.












Click it and Unblock the Notifications