ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯನಗರ ಜಿಲ್ಲೆ ಘೋಷಣೆ; ಪರಿಣಾಮದ ಬಗ್ಗೆ ಸೋಮಶೇಖರ ರೆಡ್ಡಿ ಎಚ್ಚರಿಕೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ನವೆಂಬರ್ 28: ಗಣಿ ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸದೆ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿರುವುದಕ್ಕೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಪರೋಕ್ಷವಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಳ್ಳಾರಿ ನಗರದ ಕಮ್ಮ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು ವಿಜಯನಗರ ಜಿಲ್ಲೆ ಘೋಷಣೆ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗಿಸಿರುವುದು ಈ ಸರ್ಕಾರದ ತರಾತುರಿ ನಿರ್ಧಾರ. ಈ ಹಿಂದೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ಗಣಿ ಜಿಲ್ಲೆಯ ಶಾಸಕರ ಅಭಿಪ್ರಾಯ ಪಡೆದಿದ್ದರು. ಪರ -ವಿರೋಧ ಅನಿಸಿಕೆ ವ್ಯಕ್ತವಾದ ಹಿನ್ನೆಲೆ ಮತ್ತೊಮ್ಮೆ ಸಭೆ ಕರೆಯುವುದಾಗಿ ಹೇಳಿದ್ದರು.
ಆದರೆ ಈಗ ಏಕಾಏಕಿ ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡಿದ್ದಾರೆ ಎಂದು ದೂರಿದರು.

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಬಂದ್: ಸರ್ಕಾರದ ವಿರುದ್ಧ ಘೋಷಣೆವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಬಂದ್: ಸರ್ಕಾರದ ವಿರುದ್ಧ ಘೋಷಣೆ

ಆದರೆ ಮುಂದಿನ‌ ದಿನಗಳಲ್ಲಿ ಇದರ ಪರಿಣಾಮವನ್ನು ರಾಜ್ಯ ಸರ್ಕಾರ ಎದುರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಅಖಂಡ ಬಳ್ಳಾರಿ ಜಿಲ್ಲೆ ಮತ್ತೆ ಒಂದಾಗಲಿದೆ. ಈಸ್ಟ್, ವೆಸ್ಟ್ ಜರ್ಮನಿ ಹೇಗೆ ಒಂದಾಯ್ತು ಅದೇ ರೀತಿ ಬಳ್ಳಾರಿ ಮತ್ತೆ ಒಂದಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ.

Ballari: Somashekhar Reddy Warned About The Effect Of Announcing Vijayanagar District

ನೂತನ‌ ವಿಜಯನಗರ ಜಿಲ್ಲೆ ಘೋಷಣೆ ವಿರೋಧಿ ಹೋರಾಟದ ಕುರಿತು ಚರ್ಚಿಸುವ ಸಲುವಾಗಿ ರಾಜಕೀಯ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುವೆ. ಸಭೆ ನಡೆಸಿದ ಬಳಿಕ ಸಿಎಂ ಭೇಟಿಯಾಗಲಿದ್ದೇನೆ. ಸಿಎಂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಅಖಂಡ ಜಿಲ್ಲೆಯಾಗಿರಬೇಕು ಎನ್ನುವುದು ನನ್ನ ಮತ್ತು ಎಲ್ಲಾ ಶಾಸಕರ ಅಭಿಪ್ರಾಯ.‌ ಅಲ್ಲದೆ ಜಿಲ್ಲಾ ವಿಭಜನೆ ಕುರಿತು ಕ್ಯಾಬಿನೆಟ್ ಮಿಟಿಂಗ್​ನಲ್ಲಿ ನಾನು ಕಣ್ಣೀರು ಹಾಕಿಲ್ಲ. ಕಣ್ಣೀರು ಹಾಕುವ ಅವಶ್ಯಕತೆ ನನಗಿಲ್ಲ. ಆದರೆ, ಜಿಲ್ಲೆ ಅಖಂಡವಾಗಿರಬೇಕು ಎಂದು ಭಾವನಾತ್ಮಕವಾಗಿ ಹೇಳಿದ್ದೆ.‌ ಕಣ್ಣೀರು ಹಾಕುವ ಪ್ರಮೇಯವೇ ಬರಲ್ಲ ಎಂದು ಸ್ಪಷ್ಟಪಡಿಸಿದರು.

English summary
MLA Somashekhar reddy warned government for announcing vijayanagar district without taking opinion of representatives of ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X