ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಸಂಖ್ಯೆ ಏರಿಕೆ; ಬಳ್ಳಾರಿಯಲ್ಲಿ ಮೇ 24ರ ತನಕ ಕಠಿಣ ಲಾಕ್‍ಡೌನ್

|
Google Oneindia Kannada News

ಬಳ್ಳಾರಿ, ಮೇ 19; ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜನರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮೇ 19ರ ಬೆಳಗ್ಗೆ 10ರಿಂದ ಮೇ 24ರ ಬೆಳಗ್ಗೆ 6ರವರೆಗೆ ಸಂಪೂರ್ಣ ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೆಲ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿ ಆದೇಶಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಕೊರೊನಾ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ತಜ್ಞರ ಶಿಫಾರಸ್ಸಿನಂತೆ ಈ ಕ್ರಮಕೈಗೊಳ್ಳಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಬಹಳಷ್ಟು ಶ್ರಮ ಪಡುತ್ತಿದ್ದೇವೆ. 5 ದಿನಗಳ ತನಕ ಕಠಿಣ ಲಾಕ್‌ಡೌನ್ ಇರಲಿದೆ" ಎಂದರು.

ಕೊವಿಡ್-19 ಪಾಸಿಟಿವಿಟಿ: ಟಾಪ್-5 ಪಟ್ಟಿಯಲ್ಲಿ ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆ!ಕೊವಿಡ್-19 ಪಾಸಿಟಿವಿಟಿ: ಟಾಪ್-5 ಪಟ್ಟಿಯಲ್ಲಿ ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆ!

"ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.45ಕ್ಕಿಂತ ಹೆಚ್ಚಾಗಿದೆ. ಇದರಿಂದ ಸೋಂಕಿತರ ಸಂಖ್ಯೆ ತೀವ್ರಗೊಂಡಿದ್ದು, ಆಮ್ಲಜನಕಯುಕ್ತ ಹಾಗೂ ವೆಂಟಿಲೇಟರ್ ಹಾಸಿಗೆಗಳ ಅಗತ್ಯವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಇದರಿಂದ ವೈದ್ಯಕೀಯ ಮೂಲಸೌಕರ್ಯಗಳನ್ನು ಒದಗಿಸುವುದರಲ್ಲಿ ಸಾಕಷ್ಟು ಒತ್ತಡ ಊಂಟಾಗಿರುತ್ತದೆ" ಎಂದು ಹೇಳಿದರು.

ಬಳ್ಳಾರಿ; ವಿಮ್ಸ್‌ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ ಬಳ್ಳಾರಿ; ವಿಮ್ಸ್‌ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ

Anand Singh

"ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ನೀಡಿದ ನಿರ್ದೇಶನಗಳಂತೆ ಹಾಗೂ ಜಿಲ್ಲೆಯಲ್ಲಿನ ತಜ್ಞರೊಂದಿಗೆ ಸಮಾಲೋಚಿಸಿ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ" ಎಂದು ಸಚಿವರು ಸ್ಪಷ್ಟಪಡಿಸಿದರು.

ವಿಜಯನಗರ; ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ! ವಿಜಯನಗರ; ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ!

ಯಾವ ಚಟುವಟಿಕೆ ನಿರ್ಬಂಧ; ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಮೇ 19 ರಿಂದ 24ರ ತನಕ ಜಾರಿಯಲ್ಲಿರುವ ಕಠಿಣ ಲಾಕ್‌ಡೌನ್ ಕುರಿತು ಮಾತನಾಡಿದ್ದು, "ಬೆಳಗ್ಗೆ 6ರಿಂದ 10ರವರೆಗಿನ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ, ಇದಕ್ಕೆ ಜನರು ಸಹಕರಿಸಬೇಕು" ಎಂದರು.

"ಜಿಲ್ಲೆಯಾದ್ಯಾಂತ ಮೇ ತಿಂಗಳ ಪಡಿತರ ವಿತರಣೆ ಈಗಾಗಲೇ ಬಹುತೇಕ ಮುಗಿದುಹೋಗಿದೆ. ಇನ್ನೂ ಪಡೆಯದ ಕುಟುಂಬಗಳಿಗೆ ನೇರವಾಗಿ ಗ್ರಾಹಕರ ಮನೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ತಲುಪಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು" ಎಂದು ಹೇಳಿದರು.

"ಹಾಪ್ ಕಾಮ್ಸ್ ಮೂಲಕ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಾಪ್ ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಸಂಬಂಧಟ್ಟ ತಹಶೀಲ್ದಾರ್ ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಲಿಗೆ ತರಕಾರಿ ಹಾಗೂ ಹಣ್ಣು ಮಾರಾಟ ಮಾಡಲು ಪಾಸ್ ನೀಡಲಿದ್ದಾರೆ" ಎಂದು ತಿಳಿಸಿದರು.

ಹಾಲು, ಡೈರಿ ಹಾಗೂ ಹಾಲಿನ ಬೂತುಗಳು ಮತ್ತು ಮೊಟ್ಟೆಗಳ ಅಂಗಡಿಗಳು ಮಾತ್ರ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರಯಲು ಅನುಮತಿ ಇದೆ. ಕೃಷಿಗೆ ಸಂಬಂಧಿಸಿದ ಅಗತ್ಯ ವಸ್ತುಗಳು/ ಉಪಕರಣಗಳ ಅಂಗಡಿಗಳನ್ನು ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರೆದಿರುತ್ತದೆ.

ಹೋಟೆಲ್, ರೆಸ್ಟೋರೆಂಟ್‍ ಜನರ ಮನೆ ಬಾಗಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸಲ್‍ ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ. ಔಷಧಿ ಹಾಗೂ ವೈದ್ಯಕೀಯ ಉಪಕರಣಗಳ ಅಂಗಡಿಗಳನ್ನು ತೆರೆಯಲು ಅನುಮತಿ ಇದೆ.

ಜಿಲ್ಲೆಯಲ್ಲಿರುವ ಎಲ್ಲಾ ರೀತಿಯ ಕಾರ್ಖಾನೆಗಳಲ್ಲಿ ಕಾರ್ಖಾನೆಯ ಆವರಣದ ಒಳಗಡೆ ಇರುವ ಸಿಬ್ಬಂದಿಯನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು. ಹೊರಗಡೆಯಿಂದ ಸಿಬ್ಬಂದಿಯನ್ನು ಕರೆತರಲು ಅವಕಾಶ ನೀಡಿಲ್ಲ.

ವೈದ್ಯಕೀಯ ಕಾರಣಗಳಿಂದ ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ಹಾಗೂ ರೋಗಿಗಳ ಜೊತೆಯಲ್ಲಿ ಹೋಗುವ ವ್ಯಕ್ತಿಗಳು ಓಡಾಟ ನಡೆಸಲು ಅವಕಾಶ ಕೊಡಲಾಗಿದೆ. ಪೊಲೀಸ್ ಇಲಾಖೆಯು ಅಗತ್ಯ ಕಾರಣಗಳಿಂದ ಸಂಚರಿಸುವ ವ್ಯಕ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಮುಂದುವರೆಸಬಹುದು. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧವಿರುವುದಿಲ್ಲ.

ಈ ಚಟುವಟಿಕೆಗಳಿಗೆ ನಿರ್ಬಂಧ; ಕಿರಾಣಿ ಅಂಗಡಿಗಳು, ದಿನಸಿ, ಹಣು ತರಕಾರಿಗಳು, ಮಾಂಸ ಮತ್ತು ಮೀನು, ಮದ್ಯದ ಅಂಗಡಿಗಳು, ಪಶು ಆಹಾರದ ಅಂಗಡಿಗಳು ಹಾಗೂ ಹಣ್ಣು ಮತ್ತು ತರಕಾರಿಗಳ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಆದೇಶವು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಜಾರಿಯಲ್ಲಿರಲಿದ್ದು, ಮೇ 25ರ ನಂತರ ನಂತರ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿಯನ್ನು ಪರಿಶೀಲನೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.

ಬಳ್ಳಾರಿ ಜಿಲ್ಲೆಯಲ್ಲಿ ಮೇ 18ರ ವರದಿಯಂತೆ 1799 ಹೊಸ ಪ್ರಕರಣಗಳು ದಾಖಲಾಗಿವೆ. 28 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 20290.

English summary
Rise in Coronavirus cases in Ballari district. District in-charge minister Anand Singh announced strict lockdown in Ballari and Vijayanagara district till May 24, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X