ನಾನು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ ಅಂದ್ರು ಕಿಚ್ಚ ಸುದೀಪ್
ಬಳ್ಳಾರಿ, ಮೇ. 07 : ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಸೋಮಶೇಖರರೆಡ್ಡಿ, ಗ್ರಾಮೀಣ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಣ್ಣ ಫಕ್ಕೀರಪ್ಪ ಅವರ ಪರವಾಗಿ ಚಿತ್ರನಟ ಕಿಚ್ಚ ಸುದೀಪ್ ಅವರು ನಗರ ಮತ್ತು ಗ್ರಾಮೀಣ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ರೋಡ್ ಶೋ ನಡೆಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಸುದೀಪ್ ಅವರು ನಗರ ಕ್ಷೇತ್ರದ ಶ್ರೀರಾಂಪುರ ಕಾಲನಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ, ಬಿ. ಶ್ರೀರಾಮುಲು ನನ್ನ ಹಳೆಯ ಸ್ನೇಹಿತ ಮತ್ತು ಬಂಧು. ನಾನು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ನನಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ಅವರ ಪರವಾಗಿ ಚುನಾವಣಾ ಪ್ರಚಾರ ಮಾಡುವುದರಲ್ಲಿ ತಪ್ಪೇನಿಲ್ಲ ಎಂದರು.
ಕಲಾವಿದನಾಗಿ ನಾನು ತಮ್ಮಲ್ಲಿ ಸ್ನೇಹಿತರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಳ್ಳಾರಿಗೆ ಬಂದಿರುವೆ. ಇದರಲ್ಲಿ ತಪ್ಪೇನಿಲ್ಲ. ಜಿ. ಸೋಮಶೇಖರರೆಡ್ಡಿ ಮತ್ತು ಸಣ್ಣ ಫಕ್ಕೀರಪ್ಪ ಅವರಿಗೆ ನಿಮ್ಮ ಅಮೂಲ್ಯವಾದ ಮತ ಹಾಕಿ, ಗೆಲ್ಲಿಸಿ ಎಂದರು.

ನಟ ಕಿಚ್ಚ ಸುದೀಪ್ ಅವರನ್ನು ನೋಡಲು ಜನರು ಉರಿ ಬಿಸಿಲನ್ನೂ ಲೆಕ್ಕಿಸದೇ ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದರು. ಶಿಳ್ಳೆ ಹಾಕಿ, ಕೇಕೆ ಹಾಕಿ, ಹೂವುಗಳನ್ನು ತೂರಿ, ಹೂವಿನ ಹಾರಗಳನ್ನು ಹಾಕಿ ಅಭಿಮಾನಿಗಳು ಸುದೀಪ್ ಅವರನ್ನು ಸ್ವಾಗತಿಸಿದ್ದು, ವಿಶೇಷವಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications