ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಭೇಟಿ; ಜನಾರ್ದನ ರೆಡ್ಡಿ ಅರ್ಜಿ ಸುಪ್ರೀಂನಲ್ಲಿ ವಜಾ

|
Google Oneindia Kannada News

ಬಳ್ಳಾರಿ, ನವೆಂಬರ್ 17 : ಬಳ್ಳಾರಿಗೆ ಭೇಟಿ ನೀಡಲು ಅವಕಾಶ ಕೊಡಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಳ್ಳಾರಿಗೆ ಭೇಟಿಗೆ ಸಿಬಿಐ ಆಕ್ಷೇಪ ವ್ಯಕ್ತಪಡಿಸಿತ್ತು.

ಮೂರು ವಾರಗಳಿಂದ ಕರ್ನಾಟಕ, ಆಂಧ್ರ ಪ್ರದೇಶ ರಾಜ್ಯಗಳ ಗಡಿ ಸರ್ವೇ ಕಾರ್ಯ, ಗಡಿ ಗುರುತು ಕಲ್ಲುಗಳನ್ನು ಹೂಳುವ ಕಾರ್ಯ ನಡೆಯುತ್ತಿದೆ. ಈಗ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡಬಾರದು ಎಂದು ಸಿಬಿಐ ವಾದ ಮಂಡನೆ ಮಾಡಿತ್ತು.

ಜನಾರ್ದನ ರೆಡ್ಡಿ ಬಳ್ಳಾರಿಗೆ ಹೋದರೆ ಏನು ಬೇಕಾದರೂ ಆಗಬಹುದು ಜನಾರ್ದನ ರೆಡ್ಡಿ ಬಳ್ಳಾರಿಗೆ ಹೋದರೆ ಏನು ಬೇಕಾದರೂ ಆಗಬಹುದು

ವಾದವನ್ನು ಆಲಿಸಿದ ನ್ಯಾಯಾಲಯ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು ಮತ್ತು ಡಿಸೆಂಬರ್‌ನಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿತು. ಇದರಿಂದಾಗಿ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿ ಮುಂದಕ್ಕೆ ಹೋಗಿದೆ.

2 ದಿನ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ 2 ದಿನ ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

Supreme Court Dismisses Janardhana Reddy Petition Of Visit Ballari

ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ. ಪ್ರಕರಣದಲ್ಲಿ ಜಾಮೀನು ನೀಡುವಾಗ ಬಳ್ಳಾರಿ, ಕರ್ನೂಲ್ ಮತ್ತು ಅನಂತಪುರ ಜಿಲ್ಲೆಗಳಿಗೆ ಭೇಟಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ. ಆದ್ದರಿಂದ, ಭೇಟಿಗೆ ಮೊದಲು ನ್ಯಾಯಾಲಯದ ಅನುಮತಿ ಕಡ್ಡಾಯವಾಗಿದೆ.

ಜನಾರ್ದನ ರೆಡ್ಡಿ ಅಂದು ಕಂಡ ಕನಸು ಈಗ ನನಸು ಜನಾರ್ದನ ರೆಡ್ಡಿ ಅಂದು ಕಂಡ ಕನಸು ಈಗ ನನಸು

ಜನಾರ್ದನ ರೆಡ್ಡಿ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಿದರು. ಸಿಬಿಐ ವಾದದಲ್ಲಿ ಸತ್ಯಾಂಶವಿಲ್ಲ. ನಾವು ಐದು ವರ್ಷದಿಂದ ಯಾವುದೇ ಅರ್ಜಿ ಸಲ್ಲಿಸಿಲ್ಲ. ಸಾಕ್ಷ್ಯನಾಶಕ್ಕೆ ಪ್ರಯತ್ನ ಸಹ ನಡೆದಿಲ್ಲ ಎಂದು ವಾದಿಸಿದರು.

ಈ ಹಿಂದೆ ತನಿಖಾಧಿಕಾರಿಗಳ ವಾಹನ ಸುಡಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಳ್ಳಾರಿಯಲ್ಲಿ 47 ಸಾಕ್ಷ್ಯಗಳಿವೆ. ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದರೆ ಏನು ಬೇಕಾದರೂ ಆಗಬಹುದು ಎಂದು ಸಿಬಿಐ ವಾದ ಮಂಡನೆ ಮಾಡಿತ್ತು.

English summary
After the CBI objection Supreme Court of India dismissed former minister Janardhana Reddy petition seeking permission to visit Ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X