T Narasipura Accident: ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಚೆಕ್ ವಿತರಣೆ
ಬಳ್ಳಾರಿ, ಜೂನ್, 05: ಮೈಸೂರು ಸಮೀಪ ತಿ.ನರಸೀಪುರದ ಕುರುಬೂರು ಬಳಿ ಮೇ 29ರಂದು ಭೀಕರ ರಸ್ತೆ ಅಪಘಾತದಲ್ಲಿ ಮೃತರಾಗಿದ್ದ ಬಳ್ಳಾರಿ ಜಿಲ್ಲೆ ಸಂಗನಕಲ್ಲು ಗ್ರಾಮದ ಮೃತರ ಕುಟುಂಬಸ್ಥರಿಗೆ ಭಾನುವಾರ ಸಂಜೆ ಸಚಿವ ಬಿ.ನಾಗೇಂದ್ರ ಅವರು ಪರಿಹಾರದ ಚೆಕ್ ವಿತರಣೆ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದಂತೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು.
ಅಪಘಾತದಲ್ಲಿ ಒಟ್ಟು ಈವರೆಗೆ 11 ಜನ ಮೃತರಾಗಿದ್ದು, ಮೃತರ ಪೈಕಿ ಸಂಗನಕಲ್ಲು ಗ್ರಾಮದ 10 ಜನರು ಮೃತರಾಗಿದ್ದರು. ಸದ್ಯ 7 ಮೃತರ ಕುಟುಂಬಸ್ಥರಿಗೆ ಮಾತ್ರ ಚೆಕ್ ವಿತರಣೆ ಮಾಡಲಾಗಿದ್ದು, ಇನ್ನುಳಿದ ಮೂರು ಜನರಿಗೆ ಶೀಘ್ರದಲ್ಲೇ ಚೆಕ್ ವಿತರಿಸಲಾಗುವುದು ಎಂದು ಸಚಿವ ನಾಗೇಂದ್ರ ಅವರು ತಿಳಿಸಿದರು.

ಕಳೆದ ಮೇ ತಿಂಗಳ 29ರಂದು ದೇವರ ದರ್ಶನಕ್ಕೆಂದು ಸಂಗನಕಲ್ಲು ಗ್ರಾಮದ ಮೂರು ಕುಟುಂಬಗಳ 13 ಜನರು ಪ್ರವಾಸ ತೆರಳಿದ್ದರು. ಮೈಸೂರಿಗೆ ಹೋಗಿ ತಾಯಿಯ ದರ್ಶನ ಪಡೆದು ವಾಪಸ್ ಬರುವಾಗ ದುರಾದೃಷ್ಟವಶಾತ್ ಭೀಕರ ಅಪಘಾತ ಸಂಭವಿಸಿ ಈವರೆಗೆ 11 ಜನ ಮೃತಪಟ್ಟಿದ್ದಾರೆ.
ಸ್ಥಳದಲ್ಲೇ 10 ಜನರು ಮೃತರಾಗಿದ್ದು, ಈ ಪೈಕಿ 9 ಜನ ಸಂಗನಕಲ್ಲು ಗ್ರಾಮದವರಾಗಿದ್ದರು. ಗಾಯಾಳುಗಳ ಪೈಕಿ ಸಂದೀಪ್ ಎಂಬುವವರನ್ನು ಬದುಕುಳಿಸಲು ಮೈಸೂರಿನ ಕೆ.ಆರ್.ಆಸ್ಪತ್ರೆಯ ವೈದ್ಯರು ಶಕ್ತಿ ಮೀರಿ ಪ್ರಯತ್ನ ಪಟ್ಟರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೊನ್ನೆ ಅವರು ಮೃತರಾಗಿದ್ದಾರೆ ಎಂದು ಸಚಿವ ನಾಗೇಂದ್ರ ತಿಳಿಸಿದರು.
ಈ ದುರ್ಘಟನೆ ನಡೆಯುತ್ತಿದ್ದಂತೆ ಸಿಎಂ ಅವರ ಸೂಚನೆಯಂತೆ ನಾನು ಮೈಸೂರಿನ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೆ. ಇಂತಹ ಘಟನೆ ಯಾರ ಜೀವನದಲ್ಲೂ ನಡೆಯಬಾರದು ಎಂದು ಹೇಳಿದ ಸಚಿವ ನಾಗೇಂದ್ರ, ಅಲ್ಲಿ ಹೋಗಿ ನಾನು ನೋಡಿದಾಗ ಹೃದಯವಿದ್ರಾವಕ ದೃಶ್ಯ ಇತ್ತು. ಗಾಯಾಳು ಸಂದೀಪ್ ಉಳಿಯಬಹುದೆಂಬ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ನಿಧಿಯಿಂದ ತಲಾ ಒಬ್ಬರಿಗೆ 2 ಲಕ್ಷ ರೂಪಾಯಿ ಚೆಕ್ ನೀಡುವಂತೆ ಘೋಷಣೆ ಮಾಡಿದ್ದರು. ಜೊತೆಗೆ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಸಿಎಂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನಾನು ಇಂದು ಸಂಗನಕಲ್ಲು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಹಾಗೆಯೆ ಸಿಎಂ ಪರಿಹಾರ ನಿಧಿಯ ಚೆಕ್ ವಿತರಿಸಿದ್ದೇನೆ ಎಂದರು.
ಕೇಂದ್ರ ಸರ್ಕಾರ ಕೂಡ ಪರಿಹಾರ ನೀಡಲಿ ಎಂದು ನಾನು ಕೂಡ ಒತ್ತಾಯ ಮಾಡುತ್ತೇನೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುವೆ ಎಂದು ಹೇಳಿದ ಅವರು, ಸರ್ಕಾರದಿಂದ ಉದ್ಯೋಗ ಹಾಗೂ ಇತರ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದರು.
ಇನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವೆಂಕಟೇಶ್ ಪ್ರಸಾದ್, ಮುರಳಿಕೃಷ್ಣ, ಬೆಣಕಲ್ ಬಸವರಾಜಗೌಡ, ಪಿ.ಜಗನ್, ಮುದಿಮಲ್ಲಯ್ಯ, ಪ್ರಭು ರೆಡ್ಡಿ, ಭೀಮ, ವಿಜಯ್‍ಕುಮಾರ್, ಜೋಗಿನ್ ಚಂದ್ರ, ಕೆ.ರಾಮಕೃಷ್ಣ, ದುರುಗಣ್ಣ, ಕುರುಬ ನಾಗರಾಜ, ಎಂ.ಜಿ.ಕನಕ ಸೇರಿದಂತೆ ಹಲವರು ಹಾಜರಿದ್ದರು.
ಸಾಮೂಹಿಕ ಅಂತ್ಯಕ್ರಿಯೆ
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಸಂಗನಕಲ್ಲು ಗ್ರಾಮದಲ್ಲಿ 9 ಜನರ ಮೃತದೇಹಗಳನ್ನು ಮಂಗಳವಾರ (ಮೇ 30) ಸಾಮೂಹಿಕವಾಗಿ ಅಂತ್ಯಕ್ರಿಯೆ ನಡೆಸಲಾಯಿತು.
ಸಂಗನಕಲ್ಲು ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳಿಂದ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು. ಮೈಸೂರಿನಿಂದ ನಾಲ್ಕು ಆಂಬ್ಯುಲೆನ್ಸ್‌ಗಳಲ್ಲಿ 9 ಜನರ ಮೃತದೇಹಗಳನ್ನು ತರಲಾಯಿತು. ಮೃತದೇಹಗಳನ್ನು ಕೆಲಹೊತ್ತು ಮನೆ ಅಂಗಳದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಈ ವೇಳೆ ಕೆಲವರು ಹೂಮಾಲೆ ಹಾಕಿ ನಮಸ್ಕರಿಸಿ ಅಂತಿಮ ದರ್ಶನ ಪಡೆದಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications