ಬೆಳ್ಳಂಬೆಳಗ್ಗೆ ಬಳ್ಳಾರಿ, ಗದಗನಲ್ಲಿ ಭ್ರಷ್ಟಾಚಾರ ನಿಗ್ರಹದಳ ದಾಳಿ
ಬಳ್ಳಾರಿ, ಜನವರಿ 04 : ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ಇಂದು (ಜನವರಿ 4) ಬೆಳ್ಳಂಬೆಳಗ್ಗೆ ಬಳ್ಳಾರಿ ಮತ್ತು ಗದಗ ಜಿಲ್ಲೆಯಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ.
ಬಳ್ಳಾರಿಯ ಉಪ ವಿಭಾಗಾಧಿಕಾರಿ ಶಿವಕುಮಾರ್ ಮತ್ತು ನರಗುಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಅಶೋಕ್ ಪಾಟೀಲ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿಸಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಸಂಪತ್ತುಗಳಿಸಿರುವ ದೂರಿನ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ.

ಎಸಿಬಿ ಡಿ.ಎಸ್.ಪಿ. ಮಂಜುನಾಥ್ ಅವರ ನೇತೃತ್ವದಲ್ಲಿ ಬಳ್ಳಾರಿ ಮತ್ತು ಚಿತ್ರದುರ್ಗದ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಪರಿಶೀಲನೆ ಕಾರ್ಯ ಮುಂದುವರೆದಿದೆ.












Click it and Unblock the Notifications