ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಕೊರೊನಾಗೆ ಮೊದಲ ವ್ಯಕ್ತಿ ಬಲಿ, ವಿಮ್ಸ್ ವೈದ್ಯರಿಗೆ ಆತಂಕ!

|
Google Oneindia Kannada News

ಬಳ್ಳಾರಿ, ಮೇ.19: ನೊವೆಲ್ ಕೊರೊನಾ ವೈರಸ್ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಸೋಮವಾರವಷ್ಟೇ ಕೊವಿಡ್-19 ಸೋಂಕು ತಗಲಿರುವುದು ಪತ್ತೆಯಾದ ಹಿನ್ನೆಲೆ 61 ವರ್ಷದ ಸೋಂಕಿತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಿಂದ ಕೊವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ತೀವ್ರ ಉಸಿರಾಟ ತೊಂದರೆ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಕೊರೊನಾ ವೈರಸ್ ಸೋಂಕಿತ ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ 99 ಕೊರೊನಾ: ಸೋಂಕಿತರಲ್ಲಿ 21 ಮಕ್ಕಳುರಾಜ್ಯದಲ್ಲಿ ಒಂದೇ ದಿನ 99 ಕೊರೊನಾ: ಸೋಂಕಿತರಲ್ಲಿ 21 ಮಕ್ಕಳು

ಇನ್ನು, ವಿಮ್ಸ್ ಆಸ್ಪತ್ರೆಗೆಯಲ್ಲಿ ಪರೀಕ್ಷೆಗೂ ಮೊದಲು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಮಾಡಲಾಗುತ್ತಿದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಕ್ವಾರೆಂಟೈನ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

The First Death From Coronavirus In Bellary. Total Number Increase To 38 In The State

ವಿಮ್ಸ್ ಆಸ್ಪತ್ರೆ ವೈದ್ಯರು ಸಿಬ್ಬಂದಿಗೆ ಕ್ವಾರೆಂಟೈನ್:

61 ವರ್ಷದ ಕೊರೊನಾ ವೈರಸ್ ಸೋಂಕಿತನಿಗೆ ಚಿಕಿತ್ಸೆ ನೀಡಿದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ಆತಂಕ ಎದುರಾಗಿದೆ. ಬಳ್ಳಾರಿ ಮೂಲದ ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಹಾಗೂ ಚಿಕಿತ್ಸೆ ನೀಡಿದ ಇಬ್ಬರು ವೈದ್ಯರನ್ನು ಕ್ವಾರೆಂಟೈನ್ ನಲ್ಲಿ ಇರಿಸಲು ತೀರ್ಮಾನಿಸಲಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೂ ಸಹ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಲಾಗುತ್ತದೆ.

English summary
The First Death From Coronavirus In Bellary. Total Number Increase To 38 In The State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X