ಬಳ್ಳಾರಿ; ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು

ಬಳ್ಳಾರಿ, ಅಕ್ಟೋಬರ್ 2: ಗಣಿನಾಡು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಚಿನ್ನಾಭರಣವನ್ನೇ ಕದಿಯುತ್ತಿದ್ದಾರೆಂಬ ದೂರು ಕೇಳಿಬಂದಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟ ರೋಗಿಯ ಸಂಬಂಧಿಕರಾಗಿದ್ದ ಜಿಲ್ಲೆಯ ‌ಕೊಟ್ಟೂರು ತಾಲೂಕಿನ ಇಂದ್ರಜಿತ್ ಎಂಬುವರು ಈ ಕುರಿತ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಜಿಲ್ಲೆಯ ಕೊಟ್ಟೂರು ತಾಲೂಕಿನ ಮಲ್ಕಾನಯಹಳ್ಳಿ ಮಹಿಳೆಯೊಬ್ಬರಲ್ಲಿ ‌ಸೆಪ್ಟೆಂಬರ್ 12ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಕೆಲ ದಿನಗಳ ಕಾಲ ಹೊಸಪೇಟೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಕೋವಿಡ್ ನೆಗೆಟಿವ್ ಬಂದಿತ್ತು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಾಣದ ಪರಿಣಾಮ ಬಳ್ಳಾರಿಯ ಕೋವಿಡ್ ಜಿಲ್ಲಾಸ್ಪತ್ರೆಗೆ ಸೆಪ್ಟೆಂಬರ್ 27ರಂದು ದಾಖಲಿಸಲಾಗಿತ್ತು.

Ballari: Theft Of Covid Patient Jewellery In District Hospital

ಆದರೆ, ಇಲ್ಲಿಯೂ ಚಿಕಿತ್ಸೆ ಫಲಿಸದೇ ಸೆಪ್ಟೆಂಬರ್ 28ರಂದು ರೋಗಿ ಮೃತಪಟ್ಟಿದ್ದರು.‌ ಈ ವೇಳೆ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿತ್ತು. ಆದರೆ, ಈ ವೇಳೆ ಮೃತದೇಹ ಕೊಡುವಾಗ ಅವರ ಮೈಮೇಲಿದ್ದ ಚಿನ್ನಾಭರಣಗಳು ಕಳ್ಳತನವಾಗಿವೆ. ಕೊರಳಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಓಲೆ ಕಳ್ಳತನವಾಗಿದ್ದು, ಆಸ್ಪತ್ರೆ ಸಿಬ್ಬಂದಿ ಕೇಳಿದರೆ ಕೊಡುತ್ತಿಲ್ಲ ಎಂದು ಮೃತರ ಸಂಬಂಧಿಕ ಇಂದ್ರಜಿತ್ ದೂರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+