ಬಳ್ಳಾರಿ: ಗ್ರಾ.ಪಂ ಚುನಾವಣಾ ಕಣದಲ್ಲಿ 3,290 ಅಭ್ಯರ್ಥಿಗಳು
ಬಳ್ಳಾರಿ, ಡಿಸೆಂಬರ್ 15: ಗಣಿ ನಾಡು ಬಳ್ಳಾರಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ನಡೆಯಲಿರುವ ಮೊದಲ ಹಂತದ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯಲ್ಲಿ ಅಂತಿಮವಾಗಿ 3290 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ 1 ಹಾಗೂ ಸಿರುಗುಪ್ಪ ತಾಲ್ಲೂಕಿನ 34 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದಿರುವುದರಿಂದ ಅಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯುವುದಿಲ್ಲ.
ಮೊದಲ ಹಂತದ ಚುನಾವಣೆ ಡಿ.22 ರಂದು ನಡೆಯಲಿದ್ದು, ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಅತಿ ಹೆಚ್ಚು ಗ್ರಾ.ಪಂ ಸ್ಥಾನಗಳಿವೆ. ಆದರೂ ಅಲ್ಲಿ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ಜಿಲ್ಲೆಯ ಹೊಸಪೇಟೆ ಮತ್ತು ಕಂಪ್ಲಿಯಲ್ಲಿ ಎಲ್ಲ ಸ್ಥಾನಗಳಿಗೂ ನಾಮಪತ್ರ ಸಲ್ಲಿಸಲಾಗಿದೆ.

ನಾಮಪತ್ರ ಸಲ್ಲಿಕೆಯಾಗದ ಸ್ಥಾನಗಳಿಗೆ ಗ್ರಾ.ಪಂ ಸದಸ್ಯರ ಆಯ್ಕೆ ತೀವ್ರ ಕುತೂಹಲ ಹುಟ್ಟುಹಾಕಿದೆ. ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯಾದ ನಂತರ ಇದೇ ಮೊದಲ ಬಾರಿಗೆ ಗ್ರಾ.ಪಂ ಚುನಾವಣೆ ಎದುರಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ 5 ತಾಲ್ಲೂಕುಗಳಿದ್ದು, 86 ಗ್ರಾ.ಪಂಗಳಿವೆ. ಒಟ್ಟು 1,738 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ 330 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಉಳಿದ 1,373 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.












Click it and Unblock the Notifications