• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿಂದು ಸೋಂಕಿಗೆ 9 ಸಾವು; ಕೃಷಿ ಇಲಾಖೆಯ 3 ನೌಕರರು ಬಲಿ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಆಗಸ್ಟ್‌ 13: ಗಣಿನಾಡು ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಎರಡು ದಿನಗಳ ಅಂತರದಲ್ಲಿ ಕೃಷಿ ಇಲಾಖೆಯ ಮೂರು ಮಂದಿ ನೌಕರರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

   Corona vaccine ಸಂಪೂರ್ಣ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಎರಡು ದಿನಗಳಲ್ಲಿ ಕೃಷಿ ಇಲಾಖೆ ಮೂರು ಮಂದಿ ನೌಕರರು ಸಾವನ್ನಪ್ಪಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಲ್ಲೂ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಮಾತನಾಡಿ, ಜಿಲ್ಲಾ ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಸೇರಿ ಮೂವರು ಸಾವ್ನಪ್ಪಿದ್ದಾರೆ. ಸಹಾಯಕ ನಿರ್ದೇಶಕ ಹಾಗೂ ಇಬ್ಬರು ಎಫ್ ಡಿಎ ಸೋಂಕಿನಿಂದ ಬಳಲುತ್ತಿದ್ದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

   ಕೊರೊನಾ ವೈರಸ್: ಬಳ್ಳಾರಿ 874, ರಾಮನಗರ 104, ಚಿತ್ರದುರ್ಗದಲ್ಲಿ 51 ಕೇಸ್ ಪತ್ತೆ

   ಬಳ್ಳಾರಿಯಲ್ಲಿಂದು 461 ಕೊರೊನಾ ಪ್ರಕರಣ, 9 ಸಾವು: ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 461 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 12527ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 7078 ಮಂದಿ ಗುಣಮುಖರಾಗಿದ್ದಾರೆ. 139 ಮಂದಿ ಸಾವನ್ನಪ್ಪಿದ್ದಾರೆ. 53310 ಸಕ್ರಿಯ ಪ್ರಕರಣಗಳಿವೆ. ಇಂದು ಒಂಬತ್ತು ಮಂದಿ ಸಾವನ್ನಪ್ಪಿದ್ದು, ಅಂದಾಜು 440 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

   English summary
   Three employees of agriculture department dies by coronavirus in the gap of two days in ballari,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X