ಬಳ್ಳಾರಿಯಲ್ಲಿ ಮತ್ತೆ ಕೊರೊನಾ ವೈರಸ್ ಶಂಕೆ; ಮೂವರಿಗೆ ಚಿಕಿತ್ಸೆ
ಬಳ್ಳಾರಿ, ಮಾರ್ಚ್ 13: ಬಳ್ಳಾರಿಯಲ್ಲಿ ಮತ್ತೆ ಮೂವರಿಗೆ ಕೊರೊನಾ ವೈರಸ್ ರೋಗ ಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬಳ್ಳಾರಿ ಮೂಲದ ಒಂದೇ ಕುಟುಂಬದ ಮೂವರಿಗೆ ರೋಗ ಲಕ್ಷಣಗಳು ಕಂಡ ಬಂದಿವೆ. ಹೀಗಾಗಿ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಳ್ಳಾರಿ ಮೂಲದ ಕಟುಂಬ ಒಂದು 15 ದಿನಗಳ ಹಿಂದೆ ದುಬೈಗೆ ತೆರಳಿದ್ದರು. ಬಳಿಕ ಮೂರು ದಿನಗಳ ಹಿಂದೆ ದುಬೈನಿಂದ ಬಳ್ಳಾರಿಗೆ ವಾಪಸ್ಸಾಗಿದ್ದರು. ಮೂರು ದಿನಗಳಿಂದ ಕೆಮ್ಮು ನೆಗಡಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೂವರನ್ನು ಪ್ರತ್ಯೇಕ ವಾರ್ಡ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಮೂವರ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದ್ದು ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ.












Click it and Unblock the Notifications