ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಆನಂದ್ ಸಿಂಗ್
ಹೊಸಪೇಟೆ, ಜುಲೈ 14: ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ವಿಜಯನಗರ ಶಾಸಕ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಆನಂದ್ ಸಿಂಗ್ ಗುರುವಾರ ಬಾಗಿನ ಅರ್ಪಿಸಿದ್ದಾರೆ.
ಗುರುವಾರ ಕೊಪ್ಪಳದ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳೊಂದಿಗೆ ಸಂಪ್ರದಾಯದಂತೆ ಗಂಗಾ ಪೂಜೆ, ಮಹಾಗಣಪತಿ ಪೂಜೆ ಮಾಡಿ ಬಾಗಿನ ಅರ್ಪಿಸಲಾಯಿತು. ಮಳೆನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ತುಂಗಾಭದ್ರಾ ಡ್ಯಾಮ್ ಭರ್ತಿಯಾಗಿದೆ. 105.788 ಟಿಎಂಸಿ ಸಾಮರ್ಥ್ಯವನ್ನು ಡ್ಯಾಂ ಹೊಂದಿದ್ದು, ಭರ್ತಿಯಾದ ಕಾರಣ 1.18 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗಿದೆ.
ವಾಡಿಕೆಯ ಪ್ರಕಾರ ಆಗಸ್ಟ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ತುಂಗಭದ್ರಾ ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತದೆ. ಆದರೆ ಕಳೆದ ಎರಡು ವಾರಗಳಿಂದ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗಿರುವ ಕಾರಣ ಕಳೆದೊಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲಿಯೇ ಜಲಾಶಯ ಭರ್ತಿಯಾಗಿದೆ. ಜುಲೈ ಎರಡನೇ ವಾರದಲ್ಲಿಯೇ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕಂಪ್ಲಿ ಸೇತುವೆ ಮುಳುಗಡೆ
ತುಂಗಾಭದ್ರಾ ಜಲಾಶಯದಿಂದ ಕಳೆದ ಎರಡು ದಿನಗಳಿಂದ ನದಿಗೆ ನೀರು ಬಿಟ್ಟಿರುವುದುರಿಂದ ಸಾಕಷ್ಟು ವರ್ಷಗಳಿಂದ ಬಳ್ಳಾರಿ-ಕೊಪ್ಪಳದ ಸಾರ್ವಜನಿಕರು ಸಂಚರಿಸುತ್ತಿದ್ದ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮೇಲೆ ಸಂಚಾರವನ್ನು ಸ್ಥಗಿತಗೊಂಡಿದೆ. ಇದಲ್ಲದೆ ಕೊಪ್ಪಳ ಜಿಲ್ಲೆಯ ಆನೆಗುಂದಿಯಲ್ಲಿರುವ ಕೃಷ್ಣದೇವಾಯರ ಸಮಾಧಿ, ಹಂಪಿಯಲ್ಲಿರುವ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಚಕ್ರತೀರ್ಥ, ಸ್ನಾಘಟ್ಟ, ರಾಮ-ಲಕ್ಷ್ಮಣ ದೇವಾಲಯದ ಹೊರಾಂಗಣ ಮುಳುಗಡೆಯಾಗಿದೆ.

ನದಿ ಪಾತ್ರದ ಜನರಿಗೆ ಎಚ್ಚರಿಕೆ
ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಈಗಾಗಲೆ 128732 ಕ್ಯೂಸೆಕ್ಸ್ ನೀರು ಬಿಡಯಗಡೆ ಮಾಡಲಾಗಿದೆ. ಜಲಾಶಯದಿಂದ ಹೊರ ಹರಿವು ಹೆಚ್ಚಾಗುತ್ತಿರುವ ಕಾರಣ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಗದ ಭೀತಿ ಎದುರಾಗಿದೆ. ಹಾಗಾಗಿ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ರವಾನಿಸಿದೆ.

ನಾಲ್ಕು ದಿನ ಮಳೆ ಎಚ್ಚರಿಕೆ
ಕರಾವಳಿ ಮತ್ತು ಮಲೆನಾಡಿನಲ್ಲಿ ಹಲವೆಡೆ ಇನ್ನೂ ನಾಲ್ಕುದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಗುರುವಾರವೂ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಚಣೆ ಮಾಡಲಾಗಿದೆ.

ಶಾಲಾ ಕಾಲೇಜಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಗುರುವಾರ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯಲ್ಲೂ ಬಿಡುವಿಲ್ಲದೇ ಮಳೆಯಾಗುತ್ತಿರುವ ಕಾರಣ ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications