ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಆನಂದ್ ಸಿಂಗ್

|
Google Oneindia Kannada News

ಹೊಸಪೇಟೆ, ಜುಲೈ 14: ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಲ್ಕು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ವಿಜಯನಗರ ಶಾಸಕ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಆನಂದ್‌ ಸಿಂಗ್ ಗುರುವಾರ ಬಾಗಿನ ಅರ್ಪಿಸಿದ್ದಾರೆ.

ಗುರುವಾರ ಕೊಪ್ಪಳದ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳೊಂದಿಗೆ ಸಂಪ್ರದಾಯದಂತೆ ಗಂಗಾ ಪೂಜೆ, ಮಹಾಗಣಪತಿ ಪೂಜೆ ಮಾಡಿ ಬಾಗಿನ ಅರ್ಪಿಸಲಾಯಿತು. ಮಳೆನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ತುಂಗಾಭದ್ರಾ ಡ್ಯಾಮ್ ಭರ್ತಿಯಾಗಿದೆ. 105.788 ಟಿಎಂಸಿ ಸಾಮರ್ಥ್ಯವನ್ನು ಡ್ಯಾಂ ಹೊಂದಿದ್ದು, ಭರ್ತಿಯಾದ ಕಾರಣ 1.18 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗಿದೆ. ಜಲಾಶಯದ ಎಲ್ಲಾ 33 ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರು ಬಿಡಲಾಗಿದೆ.

ಮಳೆ ನಿಲ್ಲಿಸುವಂತೆ ಕೋರಿ ದೇವರಿಗೆ ವಿಶೇಷ ಪೂಜೆ ಋಷ್ಯ ಶೃಂಗೇಶ್ವರನಿಗೆ ಪೂಜೆಮಳೆ ನಿಲ್ಲಿಸುವಂತೆ ಕೋರಿ ದೇವರಿಗೆ ವಿಶೇಷ ಪೂಜೆ ಋಷ್ಯ ಶೃಂಗೇಶ್ವರನಿಗೆ ಪೂಜೆ

ವಾಡಿಕೆಯ ಪ್ರಕಾರ ಆಗಸ್ಟ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ತುಂಗಭದ್ರಾ ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತದೆ. ಆದರೆ ಕಳೆದ ಎರಡು ವಾರಗಳಿಂದ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗಿರುವ ಕಾರಣ ಕಳೆದೊಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲಿಯೇ ಜಲಾಶಯ ಭರ್ತಿಯಾಗಿದೆ. ಜುಲೈ ಎರಡನೇ ವಾರದಲ್ಲಿಯೇ ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

 ಕಂಪ್ಲಿ ಸೇತುವೆ ಮುಳುಗಡೆ

ಕಂಪ್ಲಿ ಸೇತುವೆ ಮುಳುಗಡೆ

ತುಂಗಾಭದ್ರಾ ಜಲಾಶಯದಿಂದ ಕಳೆದ ಎರಡು ದಿನಗಳಿಂದ ನದಿಗೆ ನೀರು ಬಿಟ್ಟಿರುವುದುರಿಂದ ಸಾಕಷ್ಟು ವರ್ಷಗಳಿಂದ ಬಳ್ಳಾರಿ-ಕೊಪ್ಪಳದ ಸಾರ್ವಜನಿಕರು ಸಂಚರಿಸುತ್ತಿದ್ದ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮೇಲೆ ಸಂಚಾರವನ್ನು ಸ್ಥಗಿತಗೊಂಡಿದೆ. ಇದಲ್ಲದೆ ಕೊಪ್ಪಳ ಜಿಲ್ಲೆಯ ಆನೆಗುಂದಿಯಲ್ಲಿರುವ ಕೃಷ್ಣದೇವಾಯರ ಸಮಾಧಿ, ಹಂಪಿಯಲ್ಲಿರುವ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಚಕ್ರತೀರ್ಥ, ಸ್ನಾಘಟ್ಟ, ರಾಮ-ಲಕ್ಷ್ಮಣ ದೇವಾಲಯದ ಹೊರಾಂಗಣ ಮುಳುಗಡೆಯಾಗಿದೆ.

ಕೊಡಗಿನ ಜನರ ಕಂಗೆಡಿಸುತ್ತಿದೆ ಭಾರಿ ಗಾಳಿ- ಮಳೆ!ಕೊಡಗಿನ ಜನರ ಕಂಗೆಡಿಸುತ್ತಿದೆ ಭಾರಿ ಗಾಳಿ- ಮಳೆ!

 ನದಿ ಪಾತ್ರದ ಜನರಿಗೆ ಎಚ್ಚರಿಕೆ

ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಈಗಾಗಲೆ 128732 ಕ್ಯೂಸೆಕ್ಸ್ ನೀರು ಬಿಡಯಗಡೆ ಮಾಡಲಾಗಿದೆ. ಜಲಾಶಯದಿಂದ ಹೊರ ಹರಿವು ಹೆಚ್ಚಾಗುತ್ತಿರುವ ಕಾರಣ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರವಾಗದ ಭೀತಿ ಎದುರಾಗಿದೆ. ಹಾಗಾಗಿ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ರವಾನಿಸಿದೆ.

 ನಾಲ್ಕು ದಿನ ಮಳೆ ಎಚ್ಚರಿಕೆ

ನಾಲ್ಕು ದಿನ ಮಳೆ ಎಚ್ಚರಿಕೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಹಲವೆಡೆ ಇನ್ನೂ ನಾಲ್ಕುದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಗುರುವಾರವೂ ಆರೆಂಜ್ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೂ ಆರೆಂಜ್ ಅಲರ್ಟ್‌, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಸೇರಿದಂತೆ ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಚಣೆ ಮಾಡಲಾಗಿದೆ.

 ಶಾಲಾ ಕಾಲೇಜಿಗೆ ರಜೆ ಘೋಷಣೆ

ಶಾಲಾ ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು ಗುರುವಾರ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿಯ ಶಾಲೆಗಳಿಗೆ ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯಲ್ಲೂ ಬಿಡುವಿಲ್ಲದೇ ಮಳೆಯಾಗುತ್ತಿರುವ ಕಾರಣ ಸಕಲೇಶಪುರ, ಆಲೂರು, ಅರಕಲಗೂಡು ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

English summary
Tungabadra dam filled after incessant rains continue in the Western Ghats and Malnad region. On Thursday Tourism minister Anand Singh offered baagina to Tungabhadra dam near Hospet, Vijayanagara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X