ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯನಗರ; ಸಾರಿಗೆ ಮುಷ್ಕರ, ಬಸ್ ಸಂಚಾರ ಇದೆಯೇ?

By ವಿಜಯನಗರ ಪ್ರತಿನಿಧಿ
|
Google Oneindia Kannada News

ವಿಜಯನಗರ, ಏಪ್ರಿಲ್ 06; "ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ" ಎಂದು ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶಿನಯ್ಯ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಈವರೆಗೂ ಮುಷ್ಕರ ನಡೆಯಲಿದೆ ಎಂದು ಬೇರೆ, ಬೇರೆ ಯೂನಿಯನ್‌ಗಳು ತಿಳಿಸಿವೆ. ಯಾವುದೇ ಯೂನಿಯನ್‌ಗಳ ಮುಖಂಡರು ನಾವು ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿಲ್ಲ" ಎಂದರು.

ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್ ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್

"ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗದಂತೆ ಇಲಾಖೆ ಸನ್ನದ್ಧವಾಗಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಂಚಾರ ದಟ್ಟಣೆ ಇರುವ ಮಾರ್ಗಗಳು ಸೇರಿದಂತೆ ಎಲ್ಲೆಡೆ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಖಾಸಗಿ ಬಸ್ ಗಳು, ಟ್ರಾಕ್ಸ್, ಶಾಲಾ ವಾಹನಗಳನ್ನು ಸಾರಿಗೆ ಅಧಿಕಾರಿಗಳು ಬೇಕಾಗುವಷ್ಟು ಗುರುತಿಸಿದ್ದಾರೆ. ನಮ್ಮ ಇಲಾಖೆಗೆ ನೀಡಲು ಒಪ್ಪಿದ್ದಾರೆ" ಎಂದು ಹೇಳಿದರು.

ಏ.7 ರಿಂದ ಸಾರಿಗೆ ಮುಷ್ಕರ; ಖಾಸಗಿ ವಾಹನ ಸಂಚಾರಕ್ಕೆ ಅವಕಾಶಏ.7 ರಿಂದ ಸಾರಿಗೆ ಮುಷ್ಕರ; ಖಾಸಗಿ ವಾಹನ ಸಂಚಾರಕ್ಕೆ ಅವಕಾಶ

Transport Employees Strike Steps Taken To Run Bus At Vijayanagara

"ಬುಧವಾರ ಯಾವುದೇ ಪರಿಸ್ಥಿತಿಯಲ್ಲಿಯೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಇಂದು ರಾತ್ರಿ ಬೆಂಗಳೂರು ಸೇರಿದಂತೆ ದೂರದ ಪ್ರಯಾಣದ ಬಸ್‌ಗಳಿಗೂ ಸಹ ಪರ್ಯಾಯ ಚಾಲಕರನ್ನು ಸಿದ್ಧಪಡಿಸಲಾಗಿದೆ" ಎಂದು ತಿಳಿಸಿದರು.

ಸಾರಿಗೆ ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸಲು ಸರ್ಕಾರದ ಹುನ್ನಾರ - ಎಎಪಿ ಆರೋಪಸಾರಿಗೆ ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸಲು ಸರ್ಕಾರದ ಹುನ್ನಾರ - ಎಎಪಿ ಆರೋಪ

"ಆಸನ ಕಾಯ್ದಿರಿಸುವಿಕೆ ಆಧಾರದಲ್ಲಿ ಬಸ್‌ಗಳ ಹೊಂದಾಣಿಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಕೋವಿಡ್ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲಾ ಎಂದು ಸಿಬ್ಬಂದಿಗಳ ಮನವೊಲಿಸುವ ಪ್ರಯತ್ನ ಕೂಡ ನಡೆದಿದೆ" ಎಂದರು.

ಮಂಗಳವಾರ ಸಂಜೆ ಸಂಜೆ ಸಭೆ; ಮಂಗಳವಾರ ಸಂಜೆ 6 ಗಂಟೆಗೆ ಕೆಎಸ್ಆರ್‌ಟಿಸಿ ಡಿಪೋದಲ್ಲಿ ತಹಸೀಲ್ದಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಇಲಾಖೆಯ ಕಾರ್ಮಿಕರ ಸಭೆಯನ್ನು ನಡೆಸಲಾಗುತ್ತದೆ.

Recommended Video

#Covid19Update: 24 ಗಂಟೆಗಳಲ್ಲಿ ದೇಶದಲ್ಲಿ 96,982 ಜನರಿಗೆ ಕೊರೊನಾ ಸೋಂಕು ದೃಢ | Oneindia Kannada

ಅಲ್ಲದೇ ಸಿಬ್ಬಂದಿಗಳ ಅನುಮತಿಯೊಂದಿಗೆ ಬುಧವಾರದ ಹಾಜರಾತಿ ಖಚಿತ ಪಡಿಸಿಕೊಂಡು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲು ಚಿಂತನೆ ನಡೆಸಲಾಗಿದೆ.

English summary
All steps taken to run buses if transport employees strike began on April 7th at Hospet, Vijayanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X