ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 3 ಟಿಎಂಸಿ ಅಡಿ ನೀರು!

ಬಳ್ಳಾರಿ, ಜೂನ್ 14 : ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ 3 ಟಿಎಂಸಿ ಅಡಿ ನೀರು ಹರಿದುಬಂದಿದೆ. ಜಲಾಶಯದಲ್ಲಿ 1586 ಅಡಿ ನೀರು ಜಲಾಶಯದಲ್ಲಿದೆ.

ತುಂಗಭದ್ರಾ ನದಿಯ ಉಗಮ ಸ್ಥಾನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಿದೆ.

ಗುರುವಾರ ಜಲಾಶಯಕ್ಕೆ 28,367 ಕ್ಯುಸೆಕ್ ನೀರು ಹರಿದುಬರುತ್ತಿದೆ. ಒಂದೇ ದಿನ ಜಲಾಶಯಕ್ಕೆ 3 ಟಿಎಂಸಿ ಅಡಿ ನೀರು ಹರಿದುಬಂದಿದೆ. ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Tungabhadra dam received 3 TMC water in single day

1633 ಅಡಿ ಎತ್ತರದ ಜಲಾಶಯದಲ್ಲಿ ಜೂನ್ 14ರಂದು 1586.95 ಅಡಿ ನೀರಿನ ಸಂಗ್ರಹವಿದೆ. 2017ರ ಇದೇ ಸಮಯದಲ್ಲಿ 1568.80 ಅಡಿ ನೀರಿನ ಸಂಗ್ರಹವಿತ್ತು.

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ವಾರದಲ್ಲಿ ಜಲಾಶಯದಲ್ಲಿ 15 ರಿಂದ 20 ಟಿಎಂಸಿ ಅಡಿ ನೀರು ಸಂಗ್ರಹವಾಗಲಿದೆ ಎಂದು ಅಧಿಕಾರಿಗಳು ನೀರಿಕ್ಷೆ ಇಟ್ಟುಕೊಂಡಿದ್ದಾರೆ.

ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಳವಾಗುತ್ತಿರುವುದರಿಂದ ರೈತರು ಸಂತಸಗೊಂಡಿದ್ದಾರೆ. ಈ ವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂಬುದು ರೈತರ ಆಶಯವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರು ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದೆ. ಇದರಿಂದಾಗಿ ಕೊಪ್ಪಳ, ರಾಯಚೂರು, ಆಂಧ್ರಪ್ರದೇಶದ ವಿವಿಧ ಜಿಲ್ಲೆಗಳ ರೈತರು ಸಂತಸಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+