Get Updates
Get notified of breaking news, exclusive insights, and must-see stories!

ಬಳ್ಳಾರಿ; ಏಕಾಏಕಿ ಕುಸಿದ ತುಂಗಭದ್ರಾ ನದಿ ಸೇತುವೆ ರಸ್ತೆ

ಬಳ್ಳಾರಿ, ಸೆಪ್ಟೆಂಬರ್ 23: ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಮದಗಲಟ್ಟಿ ಸಮೀಪದ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ಇಂದು ಬೆಳ್ಳಂಬೆಳಿಗ್ಗೆ ಏಕಾಏಕಿ ಕುಸಿದಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ನದಿಯ ನೀರಿನ ಮಟ್ಟವೂ ಹೆಚ್ಚಾಗಿದೆ. ಈ ನಡುವೆಯೇ ಇಂದು ಬೆಳಿಗ್ಗೆ ಬ್ರಿಡ್ಜ್ ಕುಸಿದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಸೇತುವೆ ಮೇಲೆ ಪ್ರಯಾಣಿಸುತ್ತಿದ್ದ ಲಾರಿ ಮತ್ತು ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯವಾಗಿದೆ.

Ballari: Tungabhadra River Bridge Collapsed Near Hoovina Hadagali

ಹಡಗಲಿ ಮತ್ತು ಗದಗ ಮಾರ್ಗದ ಈ ಸಂಪರ್ಕ ಸೇತುವೆಯನ್ನು 2002ರಲ್ಲಿ ನಿರ್ಮಿಸಲಾಗಿತ್ತು. ಈಚೆಗೆ ಸೇತುವೆಯು ಶಿಥಿಲಾವಸ್ಥೆ ತಲುಪಿದ್ದು, ನವೀಕರಣ ಕಾರ್ಯ ಕೈಗೊಳ್ಳುವಂತೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ಈ ಕುರಿತು ಗಮನ ಹರಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ ಹೀಗೆದಿ ಢೀರನೆ ಸೇತುವೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ಸೇತುವೆ ಕುಸಿದ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+