ಕರ್ನಾಟಕ ಸರ್ಕಾರಕ್ಕೆ 2 ವರ್ಷ: ವಿಜಯನಗರದಲ್ಲಿ ಸಾಧನಾ ಸಮಾವೇಶ, ವಿಶೇಷತೆಗಳು

ಬಳ್ಳಾರಿ, ಮೇ 15: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಎರಡು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯಲ್ಲಿ ಸರ್ಕಾರದ ಸಾಧನಾ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾದ ಸಚಿವ ಜಮೀರ್ ಅಹಮದ್ ಖಾನ್ ಸಾಧನಾ ಸಮಾವೇಶವನ್ನು ಯಶಸ್ವಿಗೊಳಿಸಲು ಈಗಾಗಲೇ ಜಿಲ್ಲೆಯಲ್ಲಿ ತಯಾರಿಯನ್ನು ಕೈಗೊಂಡಿದ್ದಾರೆ. ವಿವಿಧ ಜಿಲ್ಲೆಗಳಿಂದ ಸರ್ಕಾರದ ಯೋಜನೆಗಳ ಫಲಾನುಭವಿಗಳು ಈ ಸಾಧನಾ ಸಮಾವೇಶಕ್ಕೆ ಆಗಮಿಸಲಿದ್ದಾರೆ.

Two Years For CM Siddaramaiah Government Rally In Hospet

ವಿವಿಧ ಸಚಿವರು ವಿಜಯನಗರ ಜಿಲ್ಲೆಯಲ್ಲಿ ಮೇ 20ರಂದು ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುತ್ತಿದ್ದಾರೆ. ವಿವಿಧ ಜಿಲ್ಲೆಗಳಿಂದ ಜನರನ್ನು ಕರೆದುಕೊಂಡು ಬರಲು ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

1 ಲಕ್ಷ ಜನರು ಸೇರುವ ನಿರೀಕ್ಷೆ: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಸಮಾವೇಶದ ಕುರಿತು ಮಾತನಾಡಿದ್ದಾರೆ, "ರಾಜ್ಯ ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಅಗತ್ಯ ಕ್ರಮ ವಹಿಸುವಂತೆ" ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಕಂದಾಯ ಗ್ರಾಮಗಳು, ಜಂಪ್ ಸರ್ವೇ, ಪೊಡಿ ಮುಕ್ತ ಗ್ರಾಮಗಳ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗುತ್ತದೆ. ಕಂದಾಯ ಇಲಾಖೆಯ ಈ ಬಹೃತ್ ಸಮಾವೇಶವನ್ನು ನಡೆಸುತ್ತಿದೆ.

ಈ ಕಾರ್ಯಕ್ರಮಕ್ಕಾಗಿ ಕೊಪ್ಪಳ ಜಿಲ್ಲೆಯ ವಿವಿಧ ತಾಲ್ಲೂಕಿನ ಫಲಾನುಭವಿಗಳನ್ನು ಕರೆದೊಯ್ಯಲು ಸುಸಜ್ಜಿತವಾದ ಬಸ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಹಾಗೂ ಫಲಾನುಭವಿಗಳಿಗೆ ಬೆಳಗಿನ ಉಪಹಾರ, ಕುಡಿಯುವ ನೀರು ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ನಂತರ ಫಲಾನುಭವಿಗಳನ್ನು ಅವರ ಮೂಲ ಸ್ಥಾನಗಳಿಗೆ ಸುರಕ್ಷಿತವಾಗಿ ತಲುಪಿಸುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿಗವಹಿಸಬೇಕು. ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, "ವಿಜಯನಗರ ಜಿಲ್ಲೆಯಲ್ಲಿ ನಡೆಯುವ ಸರ್ಕಾರದ ಸಾಧನಾ ಸಮಾವೇಶಕ್ಕಾಗಿ ಕೊಪ್ಪಳ ಜಿಲ್ಲೆಯಿಂದ 18,270 ಫಲಾನುಭವಿಗಳನ್ನು ಕರೆದೊಯ್ಯುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ 250 ಮತ್ತು ಶಾಲಾ ವಾಹನಳು ಒಳಗೊಂಡಂತೆ 125 ಖಾಸಗಿ ಬಸ್‌ಗಳು ಸೇರಿ ಒಟ್ಟು 375 ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಮತ್ತು ಈಗಾಗಲೇ ಈ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಗಳನ್ನು ಮಾಡಿ, ಅವರಿಗೆ ಮಾಹಿತಿ ನೀಡಲಾಗಿದೆ" ಎಂದು ಹೇಳಿದ್ದಾರೆ.

ಸರ್ಕಾರದ ಸಾಧನಾ ಸಮಾವೇಶದಲ್ಲಿ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಸಮರ್ಪಣಾ ಸಮಾವೇಶವನ್ನು ಹೊಸಪೇಟೆಯಲ್ಲಿ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ನಮ್ಮ ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಲಾಗುತ್ತಿದೆ.

ಈ ಹಿಂದೆ ಕೇವಲ ಕಂದಾಯ ಗ್ರಾಮಗಳೆಂದು ಘೋಷಣೆಯಾಗಿ ಉಳಿದಿದ್ದ ಗ್ರಾಮಗಳನ್ನು ನಮ್ಮ ಸರ್ಕಾರವು ಪೋಡಿಮುಕ್ತ ಗ್ರಾಮಗಳನ್ನಾಗಿ ಮಾಡಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಮಹತ್ತರವಾದ ಸಾಧನೆಯನ್ನು ಮಾಡಿದೆ. ಇದರ ಜೊತೆಗೆ ಇ-ಸ್ವತ್ತಿನ ಮೂಲಕ ನೋಂದಣಿ ಮಾಡಿಸಿದೆ. ಸ್ವ ಆಸ್ತಿ ಹಕ್ಕು ಹೊಂದದೆ ಬಧುಕುತ್ತಿರುವ ಕುಟುಂಬಗಳಿಗೆ ಹಕ್ಕು ನೀಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+