ಹಂಪಿ: ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ಆಫ್ರಿಕಾ ಜಿರಾಫೆ
ಹಂಪಿ ಕನ್ನಡ ವಿಶ್ವವಿದ್ಯಾಲಯ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಉದ್ಯಾನವನಕ್ಕೆ ಬಿಹಾರದಿಂದ ವಿಶೇಷ ಅತಿಥಿ ಆಗಮನವಾಗಿದ್ದು, ಈ ಜಿರಾಫೆಯ ವಿಶೇಷತೆಯನ್ನು ಇಲ್ಲಿ ತಿಳಿಯಿರಿ.
ವಿಜಯನಗರ, ಜನವರಿ, 29: ಹಂಪಿ ಕನ್ನಡ ವಿಶ್ವವಿದ್ಯಾಲಯ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿಶಾಸ್ತ್ರೀಯ ಉದ್ಯಾನವನಕ್ಕೆ ಬಿಹಾರದಿಂದ ವಿಶೇಷ ಅತಿಥಿ ಆಗಮನವಾಗಿದೆ. ಉದ್ಯಾನವನಕ್ಕೆ ಆಫ್ರಿಕಾ ಮೂಲದ ಜಿರಾಫೆ ಆಗಮಿಸಿದ್ದು, ಈ ಸಂತಸದ ವಿಷಯವನ್ನು ಮಲಪನಗುಡಿಯಲ್ಲಿ ಸಚಿವ ಆನಂದ್ ಸಿಂಗ್ ಮಾಧ್ಯಮದವರೊಂದಿಗೆ ಹಂಚಿಕೊಂಡರು.
ಮೃಗಾಲಯದ ಡಿ.ಸಿ.ಎಫ್ ಕಿರಣ್ ಕುಮಾರ್ ಅವರು ಬಿಹಾರ ಪಟ್ನಾ ಮೃಗಾಲಯದಿಂದ ಜಿರಾಫೆಯನ್ನು ತರುವಲ್ಲಿ ಆರು ತಿಂಗಳಿಂದ ಪ್ರಯತ್ನ ಪಟ್ಟಿದ್ದಾರೆ. ಇಲ್ಲಿನ ಮೃಗಾಲಯದಲ್ಲಿ ಜಿರಾಫೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಾಲ್ಕು ದಿನಗಳ ರಸ್ತೆ ಪ್ರಯಾಣದ ಮೂಲಕ ಬಿಹಾರದಿಂದ ಜಿರಾಫೆಯನ್ನು ಕರೆ ತರಲಾಗಿದೆ. 4 ವರ್ಷದ ಈ ಜಿರಾಫೆಗೆ ಮೈಸೂರು ಮೃಗಾಲಯದಿಂದ ಆಗಮಿಸುವ ಮತ್ತೊಂದು ಜಿರಾಫೆ ಜೋಡಿಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ಬಿಹಾರದಿಂದ ವಿಶೇಷ ಅತಿಥಿ ಆಗಮನ
2017 ರಲ್ಲಿ ಪ್ರಾರಂಭಿಸಲಾದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯ ರಾಜ್ಯದ ಮೂರನೇ ಹುಲಿ ಮತ್ತು ಸಿಂಹ ಸಫಾರಿ ಸ್ಥಳವಾಗಿದೆ. ಈಗಾಗಲೇ ಉದ್ಯಾನವನದಲ್ಲಿ ಹುಲಿ, ಸಿಂಹ, ಸ್ಪಾಟರ್ ಜಿಂಕೆ, ಸಾಂಬಾರ್, ಬಾರ್ಕಿಂಗ್ ಜಿಂಕೆ ಮತ್ತು ಇತರ ಪ್ರಾಣಿಗಳಿವೆ. ಹಾಗೆಯೇ ಮೊಸಳೆಗಳು, ಕತ್ತೆಕಿರುಬ, ಚಿರತೆ, ಕರಡಿ, ಆಮೆ, ನರಿ ಮತ್ತು ಲಂಗೂರ್ ಸೇರಿದಂತೆ 80ಕ್ಕೂ ಹೆಚ್ಚಿನ ಜಾತಿಯ ಪಕ್ಷಿಗಳು ಸೇರಿದಂತೆ ಹಲವಾರು ಪ್ರಾಣಿಗಳಿವೆ. ಇವುಗಳ ಗುಂಪಿಗೆ ಹೊಸದಾಗಿ ಜಿರಾಫೆ ಕೂಡ ಸೇರ್ಪಡೆಯಾಗಿದೆ. ಹೊಸ ಅತಿಥಿಯ ಆಗಮನದಿಂದ ಮೃಗಾಲಯದ ಖ್ಯಾತಿ ಮತ್ತಷ್ಟು ಹೆಚ್ಚಾಗಲಿದೆ.

ಹಂಪಿ ಮೃಗಾಲಯಕ್ಕೆ ಆಗಮಿಸಿದ ಜಿರಾಫೆ
ಮೃಗಾಲಯದ ಪ್ರಾಣಿಗಳ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ಮೈಸೂರು ಮೃಗಾಲಯ ನೀಡಿದ ಜೀಬ್ರಾ, ಕಾಡೆಮ್ಮೆ ಮತ್ತಿತರ ಪ್ರಾಣಿಗಳ ಬದಲಾಗಿ ನಾಲ್ಕು ವರ್ಷದ ಹೆಣ್ಣು ಜಿರಾಫೆಯನ್ನು ಪಟ್ನಾ ಮೃಗಾಲಯದಿಂದ ಹಂಪಿ ಮೃಗಾಲಯಕ್ಕೆ ನೀಡಲಾಗಿದೆ. ಇದನ್ನು ತರಲು ಇಲ್ಲಿಂದ ವಿಶೇಷ ಬೋನು ಸಮೇತ ವಾಹನಗಳಲ್ಲಿ ಹೋಗಿ, ಸತತ ಒಂದು ವಾರ ಕಾಲ ನಿಧಾನವಾಗಿ ಪ್ರಯಾಣಿಸಿ ಕಮಲಾಪುರದ ಮೃಗಾಲಯಕ್ಕೆ ಬರಲಾಗಿದೆ. ಈ ಜಿರಾಫೆಗಾಗಿ ಈಗಾಗಲೇ ವಿಶೇಷವಾದ ಆವರಣವನ್ನು ಸಿದ್ಧಪಡಿಸಲಾಗಿದ್ದು, ಇದಕ್ಕೆ ಬೇಕಾದ ಆಹಾರ ಹಾಗೂ ಆರೈಕೆಯ ವ್ಯವಸ್ಥೆಯನ್ನು ಮಾಡಲಾಗಿದೆ.

ಸುದೀರ್ಘ ಪ್ರಯಾಣದಿಂದ ಚೇತರಿಸಿಕೊಂಡ ಜಿರಾಫೆ ಲವ ಲವಿಕೆಯಿಂದ ಓಡಾಡುತ್ತಿದೆ ಎಂದು ಹಂಪಿ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್.ಕಿರಣ್ ಮಾಹಿತಿ ನೀಡಿದ್ದಾರೆ. ಜಿರಾಫೆ ತರುವಲ್ಲಿ ಕಾರ್ಯನಿರ್ವಹಿಸಿ ಪಶುವೈದ್ಯಾಧಿಕಾರಿ ಸೇರಿದಂತೆ ಇತರೆ ಸಿಬ್ಬಂದಿಯನ್ನು ಸಚಿವ ಆನಂದ್ ಸಿಂಗ್ ಅಭಿನಂದಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications