ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ!
ವಿಜಯನಗರ ಜನವರಿ 16: ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯನಗರದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಮದುವೆಯಾಗಲು ಯುವತಿ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಮಾಡಿಕೊಂಡ ಯುವಕ ಗುಡೇಕೋಟೆ ಗ್ರಾಮದ ಬಿ. ಮಧುಸೂದನ್ (26) ಎಂದು ತಿಳಿದುಬಂದಿದೆ. ಅರೆ ಹುಚ್ಚನಂತೆ ಯುವಕನ ತಂದೆ ವರ್ತಿಸುತ್ತಾರೆಂಬ ಕಾರಣಕ್ಕೆ ಯುವಕನಿಗೆ ಕನ್ಯೆ ಕೊಡಲು ನಿರಾಕರಿಸುತ್ತಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದ ಯುವಕ ಇತ್ತೀಚೆಗೆ ಮದ್ಯಕ್ಕೆ ದಾಸನಾಗಿದ್ದ.

ಅಲ್ಲದೇ ಇನ್ನು ಮುಂದೆ ನಾನು ಮದುವೆಯಾಗುವುದಿಲ್ಲ ಎಂದು ವಿಷ ಸೇವಿಸಿದ್ದಾನೆ. ಕೂಡಲೇ ಆತನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
(ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನಿಮಗೆ ಬೆಂಬಲ ಬೇಕಾದರೆ ಅಥವಾ ಯಾರೊಂದಿಗಾದರೂ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬೇಕಿದ್ದರೇ ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಹಾಯವಾಣಿಗಳು: ಆಸ್ರ: 022 2754 6669; ಸ್ನೇಹ ಇಂಡಿಯಾ ಫೌಂಡೇಶನ್: +914424640050 ಮತ್ತು ಸಂಜೀವಿನಿ: 011-24311918, ರೋಶ್ನಿ ಫೌಂಡೇಶನ್: ಸಂಪರ್ಕ: 040-66202001, 040-66202000, ಒಂದು ಜೀವನ: ಸಂಪರ್ಕ ಸಂಖ್ಯೆ: 78930 78930, SEVA: ಸಂಪರ್ಕ ಸಂಖ್ಯೆ: 09441778290 )












Click it and Unblock the Notifications