ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಮುಳುಗಡೆಯಾದ ಹಂಪಿಯ ಸ್ಮಾರಕಗಳು

By ವಿಜಯನಗರ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 15: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಜಲಾಶಯ ತುಂಬಿರುವ ಪರಿಣಾಮ 60 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ ಎಂದು ಜಲಾಶಯ ಬೋರ್ಡ್ ಸ್ಪಷ್ಟನೆ ನೀಡಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಕುರಿತು ಮಂಗಳವಾರವೇ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಡಪ, ಅನಂತಪುರ ಹಾಗೂ ಮೆಹಬೂಬ್ ನಗರ ಜಿಲ್ಲಾಡಳಿತಗಳಿಗೆ ತುಂಗಭದ್ರಾ ಜಲಾಶಯ ಬೋರ್ಡ್ ಮಾಹಿತಿ ರವಾನಿಸಿತ್ತು.

ಈಗಾಗಲೇ 60 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ವಿಶ್ವವಿಖ್ಯಾತ ಹಂಪಿಯ ಹಲವು ಸ್ಮಾರಕಗಳು, ಮಂಟಪಗಳು ಮುಳುಗಡೆಯಾಗಿವೆ. ಪ್ರಮುಖವಾಗಿ ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ಮಂಟಪ ಮುಳುಗಡೆಯಾಗಿವೆ. ಇನ್ನು ಈಗಾಗಲೇ ಸ್ಥಳೀಯ ಆಡಳಿತಗಳ ನೆರವಿನಿಂದ ಆಯಾ ಜಿಲ್ಲಾಡಳಿತಗಳೂ ಸಹ ಜನರಿಗೆ ನದಿಪಾತ್ರದ ಕಡೆ ಸುಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಕಾಡುತ್ತಿದೆ.

Vijayanagara: Tungabhadra Dam Releases More Water, Several Hampi Monuments Submerged

ಉಕ್ಕಿ ಹರಿದ ಮಲಪ್ರಭಾ ನದಿ
ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ- ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ ಸೇತುವೆ ಮೂಲಕ ಸಂಚಾರ ಕಲ್ಪಿಸಲಾಗಿದೆ.

ಇದೇ ವರ್ಷದಲ್ಲಿ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆ ಮೇಲೆ ಮೊಳಕಾಲುದ್ದ ನೀರು ಹರಿಯುತ್ತಿದ್ದು, ನದಿ ತೀರದ ಜಮೀನಿನಲ್ಲಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.

Vijayanagara: Tungabhadra Dam Releases More Water, Several Hampi Monuments Submerged

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ
ಮುಂದಿನ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಕೂಡ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮೂರು ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದೆ. ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಇದರಿಂದ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈ, ಥಾಣೆ, ವಾರ್ಧಾ, ಪಾಲ್ಗಾರ್, ಸಿಂಧುದುರ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಹಾಗೂ ಕೊಂಕಣ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಛಾಗುವುದಾಗಿ ಇಲಾಖೆ ತಿಳಿಸಿದೆ. ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ರಾಯಗಢದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

English summary
More water released from Tungabhadra dam, several Hampi Monuments and mantapa;s submerged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X