ಕರೆಂಟ್‌ ಬಿಲ್‌ ಕಟ್ಟಿ ಅಂದ್ರೆ ಸಿದ್ರಾಮಯ್ಯ ಸರ್ಕಾರ ಇದೆಯಲ್ಲ ಅಂತಿದ್ದಾರೆ ಬಳ್ಳಾರಿ ಜನ

ಬಳ್ಳಾರಿ, ಮೇ, 19: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದ ಬಳಿಕ ಗ್ರಾಹಕರು ಕರೆಂಟ್ ಬಿಲ್ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯುತ್ ಬಿಲ್ ನೀಡಲು ಮತ್ತು ವಸೂಲಿಗೆ ಹೋದ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲೂ ನಡೆದಿದೆ.

ಕಾಂಗ್ರೆಸ್‌ ಗೆದ್ದರೆ ಪ್ರತಿ ತಿಂಗಳು ಪ್ರತಿ ಮನೆಗೆ 200 ಯುನಿಟ್‌ ವಿದ್ಯುತ್‌ ಉಚಿತ ವಿದ್ಯುತ್‌ ಕೊಡುವುದಾಗು ಹೇಳಿದ್ದರು. ಇದೀಗ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ ನಾವು ವಿದ್ಯುತ್‌ ಬಿಲ್‌ ಕಟ್ಟುವುದಿಲ್ಲ ಎಂದು ಗ್ರಾಹಕರು ಹೇಳುತ್ತಿದ್ದಾರೆ. ಮೇ 10ರಂದು ವಿಧಾನಸಭೆ ಚುನಾವಣೆ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಿದೆ.

Ballari district

ಫಲಿತಾಂಶ ಪ್ರಕಟವಾದ ದಿನದಿಂದ ಸತತವಾಗಿ ಐದು ದಿನಗಳಿಂದ ಹಳ್ಳಿಗಳಿಗೆ ಹೋಗುತ್ತಿರುವ ಜೆಸ್ಕಾಂ ಮೀಟರ್‌ ರೀಡರ್‌ಗಳು ಇದೇ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಚಾಲ್ತಿ ವಿದ್ಯುತ್‌ ಬಿಲ್‌ಗಳು ಹೋಗಲಿ, ಹಳೇ ಬಾಕಿಯನ್ನು ಪಾವತಿಸುತ್ತಿಲ್ಲ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 7.76ಲಕ್ಷ ಗ್ರಾಹಕರಿದ್ದು, ಈ ವರ್ಷ ಮಾರ್ಚ್‌ ಅಂತ್ಯದವರೆಗೆ ಬರಬೇಕಾದ ಬಾಕಿ 845 ಕೋಟಿ ರೂಪಾಯಿ ಆಗಿದೆ.

ಪ್ರತಿ ತಿಂಗಳು ಜೆಸ್ಕಾಂ ತನ್ನ ಗ್ರಾಹಕರಿಗೆ 20.66 ಕೋಟಿ ರೂಪಾಯಿ ಮೊತ್ತದ ವಿದ್ಯುತ್‌ ಪೂರೈಸುತ್ತಿದೆ. ಆದರೆ ವಸೂಲಾಗುತ್ತಿರುವ ಬಿಲ್‌ ಮಾತ್ರ 18.80 ಕೋಟಿ ರೂಪಾಯಿ ಆಗಿದ್ದು, ಇದರಿಂದಾಗಿ ತಿಂಗಳಿಗೆ ಸುಮಾರು 2 ಕೋಟಿ ರೂಪಾಯಿ ನಷ್ಟ ಆಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಪೂರೈಕೆ ಮತ್ತಿತರ ಸೋರಿಕೆಯಿಂದ ಶೇಕಡಾ 12ರಷ್ಟು ವಿದ್ಯುತ್‌ ನಷ್ಟವಾಗುತ್ತಿದೆ. ಮೊದಲು ನಷ್ಟದ ಪ್ರಮಾಣ ಶೇಕಡಾ 15ರಷ್ಟಿತ್ತು. ಇದೀಗ ಈ ಪ್ರಮಾಣವನ್ನು ತಗ್ಗಿಸಲಾಗಿದೆ. ಭಾಗ್ಯಜ್ಯೋತಿ ಫಲಾನುಭವಿಗಳಿಗೆ 40 ಯುನಿಟ್ ಉಚಿತವಾಗಿ ಪೂರೈಕೆ ಮಾಡಲಾಗುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆ ಉಚಿತ ವಿದ್ಯುತ್‌ ಕೊಡಲಾಗುತ್ತಿದೆ. ಅಲ್ಲದೆ, ಇನ್ನೂ ಶೇಕಡಾ 30ರಷ್ಟು ಗ್ರಾಹಕರಿಗೆ ಮೀಟರ್‌ಗಳನ್ನೇ ಅಳವಡಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್‌ ಗ್ಯಾರಂಟಿಯಂತೆ ಪ್ರತಿ ತಿಂಗಳು ಪ್ರತಿ ಮೀಟರ್‌ಗೆ 200 ಯುನಿಟ್‌ ವಿದ್ಯುತ್‌ ಉಚಿತ ಆಗಿರುವುದರಿಂದ ತಿಂಗಳಿಗೆ ಒಂದು ಮೀಟರ್‌ಗೆ 450ರಿಂದ 500 ರೂಪಾಯಿ ವರೆಗೆ ಸರ್ಕಾರಕ್ಕೆ ಹೊರೆ ಆಗಲಿದೆ. ಈಗಾಗಲೇ ಉಚಿತವಾಗಿರುವ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಗಳನ್ನು 200 ಯುನಿಟ್‌ನಲ್ಲಿ ವಿಲೀನ ಮಾಡಲಾಗುವುದದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸರ್ಕಾರದಿಂದ ಆದೇಶ ಬರುವವರೆಗೆ ಏಪ್ರಿಲ್ ತಿಂಗಳಲ್ಲಿ ಬಳಸಿದ್ದ ವಿದ್ಯುತ್ ಬಿಲ್ ಪಾವತಿಸಿ ಎಂದು ಸಿಬ್ಬಂದಿ ಹೇಳಿದರೂ ಜನ ಕೇಳುತ್ತಿಲ್ಲ. ನಾವು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಬಿಲ್ ಪ್ರತಿ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಪ್ರತಿ ಮೀಟರ್‌ಗೆ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿದೆ.

ಆದ್ದರಿಂದ ರಾಜ್ಯ ಸರ್ಕಾರ ರಚನೆಯಾದ ಬಳಿಕ ಈ ಸಂಬಂಧ ತೀರ್ಮಾನ ಕೈಗೊಳ್ಳಲಿದೆದೆ. ಸರ್ಕಾರದ ತೀರ್ಮಾನದ ನಿರೀಕ್ಷೆಯಲ್ಲಿ ನಾವೂ ಇದ್ದೇವೆ ಎಂದು ಜೆಸ್ಕಾಂ ಬಳ್ಳಾರಿ ವಿಭಾಗದ ಅಧೀಕ್ಷಕ ಎಂಜಿನಿಯರ್‌ ಬಿ. ವೆಂಕಟೇಶುಲು ಹೇಳಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರದ ತೀರ್ಮಾನ ಆಗುವವರೆಗೂ ಗ್ರಾಹಕರು ಜೆಸ್ಕಾಂ ಜೊತೆ ಸಹಕರಿಸಬೇಕು. ಬಿಲ್‌ ಮತ್ತು ಹಳೇ ಬಾಕಿ ಪಾವತಿಸಬೇಕು ಎಂದು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+