• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಗ್ರಾಮಸ್ಥರು

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 14: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ರಾರಾವಿ ನದಿಯಲ್ಲಿ (ವೇದಾವತಿ ನದಿ) ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ.

ನೆರೆಯ ಆಂಧ್ರಪ್ರದೇಶದ ಅಧೋನಿ ನಗರದ ದೇವೇಂದ್ರ ಎಂಬಾತನು ಪ್ರಾಣಾಪಾಯದಿಂದ ಪಾರಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಆತನ‌ ಪತ್ನಿ ಹನುಮಂತಮ್ಮ ಅವರೊಂದಿಗೆ ಭಾನುವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಿರುಗುಪ್ಪ ನಗರದಲ್ಲಿ ನೆಲೆಸಿರುವ ತನ್ನ ಮಗಳ ಆರೋಗ್ಯ ಸ್ಥಿತಿ ವಿಚಾರಿಸಲು ಬಂದಿದ್ದರು.

ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜೀವಕಳೆ ಪಡೆದ 'ಮಾನಸ ಸರೋವರ'ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜೀವಕಳೆ ಪಡೆದ 'ಮಾನಸ ಸರೋವರ'

ಮಗಳ ಆರೋಗ್ಯ ವಿಚಾರಿಸಿ ವಾಪಸ್ ಆಧೋನಿಗೆ ಬೈಕ್ ನಲ್ಲಿ ವಾಪಾಸಾಗುತ್ತಿದ್ದಾಗ ರಾರಾವಿ ನದಿಯ (ಹಗರಿ ನದಿಯ ಸೇತುವೆ ಮೇಲೆ ಚಲಿಸುತ್ತಿದ್ದಾಗ) ನೀರಿನ ರಭಸಕ್ಕೆ ಬೈಕ್ ಸ್ಕಿಡ್ ಆದ ಪರಿಣಾಮ ಆ ನದಿಯಲ್ಲಿ ಕೊಚ್ಚಿ ಹೋಗಿ ಪ್ರಾಣಾಪಾಯಕ್ಕೆ ಸಿಲುಕಿದ್ದಾನೆ.

ನದಿಯಲ್ಲಿ ಕೊಚ್ಚಿ ಹೋಗುತ್ತಿರುವಾಗ ಈಜಾಡುತ್ತಾ ಆಸರೆಗಾಗಿ ಜಾಲಿಯ ಬೇಲಿಯನ್ನು ಹಿಡಿದುಕೊಂಡು ರಕ್ಷಣೆಗಾಗಿ ಜೋರಾಗಿ ಕೂಗಿಕೊಂಡಿದ್ದಾನೆ. ಆಗ ಸ್ಥಳೀಯ ಗ್ರಾಮಸ್ಥರು ಆತನನ್ನು ರಕ್ಷಣೆ ಮಾಡಿದ್ದಾರೆ. ಇದರಿಂದ ದೇವೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದು, ಬೈಕ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

English summary
Villagers have rescued a man who washed Away in the Vedavati River in Siruguppa Taluk in Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X