ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸೂಪರ್ ಸ್ಪೆಷಾಲಿಟಿ ಟ್ರಾಮಾ ಸೆಂಟರ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಆಗಸ್ಟ್ 31: ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್‌ ಸ್ಪೆಷಾಲಿಟಿ ಟ್ರಾಮಾ ಸೆಂಟರ್" ತೆರೆಯಲಾಗಿದ್ದು, ಇದು ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ತಿಳಿಸಿದರು.

ಪ್ರಧಾನಿ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ವಿಮ್ಸ್) ಬಳ್ಳಾರಿಯಲ್ಲಿ "ಸೂಪರ್ ಸ್ಪೆಷಾಲಿಟಿ ಟ್ರೌಮಾ ಘಟಕ"ವನ್ನು‌ ಸೋಮವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್‌ ಅವರು ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಕಾರ್ಯಕ್ರಮದಲ್ಲಿ‌ ಸಿಎಂ ಬಿ.ಎಸ್.‌ಯಡಿಯೂರಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಪಾಲ್ಗೊಂಡಿದ್ದರು.

Recommended Video

ಕಾಂಗ್ರೆಸ್ ನ ನಿಷ್ಠಾವಂತ ಕಟ್ಟಾಳು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ | Oneindia Kannada
 ತುರ್ತು ಚಿಕಿತ್ಸೆಗೆ ತಕ್ಷಣವೇ ಈಗ ಚಿಕಿತ್ಸೆ ಲಭ್ಯ

ತುರ್ತು ಚಿಕಿತ್ಸೆಗೆ ತಕ್ಷಣವೇ ಈಗ ಚಿಕಿತ್ಸೆ ಲಭ್ಯ

ಈ ವೇಳೆ ಮಾತನಾಡಿದ ಸಚಿವ ಡಾ. ಸುಧಾಕರ್, "ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯುನ್ನತ ಟ್ರೌಮಾ ಸೆಂಟರ್ ತೆರೆದಿರುವುದು ಅತ್ಯಂತ ಅವಶ್ಯವಾಗಿದೆ. ಪ್ರತಿ ವರ್ಷ ರಾಜ್ಯದಲ್ಲಿ 4.7 ಲಕ್ಷ ಜನರು ರಸ್ತೆ ಅಪಘಾತಕ್ಕೆ ಒಳಗಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮೃತಪಡುತ್ತಿದ್ದಾರೆ. ರಸ್ತೆ ಅಪಘಾತ ನಡೆದ 1 ಗಂಟೆ ಗೋಲ್ಡನ್‌ ಹವರ್ ಎಂದು ಪರಿಗಣಿಸುತ್ತೇವೆ. ಈ ಅವಧಿಯಲ್ಲಿ ಚಿಕಿತ್ಸೆ ನೀಡಿದರೆ ಬದುಕಿಸಬಹುದು. ಇಂಥ ತುರ್ತು ಚಿಕಿತ್ಸೆಗಾಗಿ ದೂರದ ಬೆಂಗಳೂರಿಗೆ ಬರುವ ಅಗತ್ಯವಿತ್ತು. ಈಗ ಬಳ್ಳಾರಿ ಸುತ್ತಮುತ್ತಲಿನ ಜಿಲ್ಲೆ ಹಾಗೂ ರಾಜ್ಯದಲ್ಲಿ ತುರ್ತು ಚಿಕಿತ್ಸೆ ಟ್ರೋಮಾ ಕೇಂದ್ರದಲ್ಲಿ ಪಡೆಯಬಹುದು ಎಂದರು.

ಬೆಂಗಳೂರಿನಲ್ಲೇ ಕೊವಿಡ್-19 ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಬೆಂಗಳೂರಿನಲ್ಲೇ ಕೊವಿಡ್-19 ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

"ವೈದ್ಯಕೀಯ ಸೇವೆಯಲ್ಲಿ ಕರ್ನಾಟಕ ಮುಂದಿದೆ"

ನೂತನ ಟ್ರೌಮಾ ಸೆಂಟರ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಕೊಡುಗೆ ಅಪಾರ. ಒಟ್ಟು 200 ಬೆಡ್‌ ಸಾಮರ್ಥ್ಯದ ಟ್ರೌಮಾ ಸೆಂಟರ್‌ 72 ಐಸಿಯು ಬೆಡ್, 20 ವೆಂಟಿಲೇಟರ್ ಹಾಗೂ ಜನರಲ್ ವಾರ್ಡ್ ಗಳನ್ನು ಒಳಗೊಂಡಿದೆ. ಹತ್ತಿರದ ನೆರೆ ರಾಜ್ಯದಲ್ಲಿ ಅಪಘಾತವಾದರೂ ಈ ಟ್ರೌಮಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲು ಸಹಕಾರಿಯಾಗಲಿದೆ. ವೈದ್ಯಕೀಯ ಸೇವೆಯಲ್ಲಿ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮುಂಚೂಣಿಯಲ್ಲಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸಲು ಹಾಗೂ ಸೂಕ್ತ ಚಿಕಿತ್ಸೆಗಾಗಿ ಕಡಿಮೆ ಅವಧಿಯಲ್ಲಿ 20 ಸಾವಿರ ಐಸಿಯು ಬೆಡ್‌ಗಳ ನಿರ್ಮಾಣವನ್ನು ಮಾಡುವ ಮೂಲಕ ರಾಜ್ಯದ ಸಾಮರ್ಥ್ಯ ತೋರಿಸಿದ್ದೇವೆ ಎಂದರು.

 2021ರೊಳಗೆ ನೂತನ ವೈದ್ಯಕೀಯ ಕಾಲೇಜು ಪ್ರಾರಂಭ

2021ರೊಳಗೆ ನೂತನ ವೈದ್ಯಕೀಯ ಕಾಲೇಜು ಪ್ರಾರಂಭ

ಕೇಂದ್ರ ಸಚಿವ ಹರ್ಷ ವರ್ಧನ್ ಅವರು ಕರ್ನಾಟಕದಲ್ಲಿ ಶೀಘ್ರವೇ ವೈದ್ಯಕೀಯ ಕಾಲೇಜು ಪ್ರಾರಂಭಿಸುವಂತೆ ತಿಳಿಸಿರು. ಅದಕ್ಕೆ ಉತ್ತರಿಸಿದ ವೈದ್ಯಕೀಯ ಸಚಿವ ಸುಧಾಕರ್, "ಚಿಕ್ಕಬಳ್ಳಾಪುರ ಸೇರಿದಂತೆ 4 ನೂತನ ವೈದ್ಯಕೀಯ ಕಾಲೇಜುಗಳು 2021 ರೊಳಗೆ ಕಾರ್ಯಾರಂಭ ಮಾಡಲಿವೆ" ಎಂದರು. ಇತ್ತೀಚೆಗೆ ಚಿಕ್ಕಬಳ್ಳಾಪುರಕ್ಕೆ ಭೇಟಿ‌ ನೀಡಿದ್ದ ವೇಳೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದಾಗಿ ಉಲ್ಲೇಖಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್‌ ಜಾರಿ: ಸುಧಾಕರ್ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್‌ ಜಾರಿ: ಸುಧಾಕರ್

ಇದೇ ಸಂದರ್ಭ ವಿಮ್ಸ್ ನೂತನ ಸಿಟಿ ಸ್ಕ್ಯಾನರ್ ಅನ್ನು ಉದ್ಘಾಟಿಸಲಾಯಿತು. ಸಮಾರಂಭದಲ್ಲಿ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಇತರರು ಪಾಲ್ಗೊಂಡಿದ್ದರು.

 ಟ್ರೌಮಾ ಸೆಂಟರ್‌ ವಿಶೇಷತೆ

ಟ್ರೌಮಾ ಸೆಂಟರ್‌ ವಿಶೇಷತೆ

150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟ್ರೌಮಾ ಕೇಂದ್ರ ಒಟ್ಟು 200 ಬೆಡ್‌ ಒಳಗೊಂಡಿದೆ. 72 ಐಸಿಯು ಬೆಡ್, 20 ವೆಂಟಿಲೇಟರ್, ಸಿಟಿ ಸ್ಕ್ಯಾನ್, ಡಿಜಿಟಲ್‌ ಎಕ್ಸ್‌ ರೇ ಸೌಕರ್ಯ ಇರಲಿದೆ. ಜೊತೆಗೆ ಸೂಪರ್‌ ಸ್ಪೆಷಾಲಿಟಿ ಎಮರ್ಜೆನ್ಸಿ ಹಾಗೂ ಟ್ರೌಮಾ, ನ್ಯೂರೋ ಸರ್ಜರಿ ಹಾಗೂ ಆರ್ಥೋಪೆಡಿಕ್ ಸೇವೆಯನ್ನು ಕೂಡ ಒಳಗೊಂಡಿದೆ.

English summary
Super speciality trauma centre built in ballari vims inaugurated online by chief minister yediyurappa today. Medical education minister K Sudhakar explained the details to central minister Dr. Harshavardhan
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X