Sandur By Election: ಸಂಡೂರು ಉಪ ಚುನಾವಣೆ, ಮತಯಂತ್ರ ಸೇರಿದ 6 ಅಭ್ಯರ್ಥಿಗಳ ಭವಿಷ್ಯ
ಬಳ್ಳಾರಿ, ನವೆಂಬರ್ 14: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ 2024ರ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಚುನಾವಣಾ ಕಣದಲ್ಲಿದ್ದ ಆರು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ನವೆಂಬರ್ 23ರ ಶನಿವಾರ ಮತ ಎಣಿಕೆ ನಡೆಯಲಿದೆ. ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಇ. ತುಕಾರಾಂ ಬಳ್ಳಾರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪ ಚುನಾವಣೆ ಎದುರಾಗಿತ್ತು.
ಸಂಡೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಶೇ 76.24ರಷ್ಟು ಮತದಾನವಾಗಿದೆ. ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಅಭ್ಯರ್ಥಿಗಳು ಗುರುವಾರ ಮತದಾನದ ಬಳಿಕದ ಲೆಕ್ಕಚಾರದಲ್ಲಿ ತೊಡಗಿದ್ದಾರೆ.

ಸಂಡೂರು ವಿಧಾನಸಭೆ ಉಪ ಚುನಾವಣಾ ಕಣದಲ್ಲಿ ಒಟ್ಟು ಅಭ್ಯರ್ಥಿಗಳಿದ್ದರು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ನವೆಂಬರ್ 23ರ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.
ಆರು ಅಭ್ಯರ್ಥಿಗಳು ಕಣದಲ್ಲಿ: ಸಂಡೂರು ಉಪ ಚುನಾವಣೆ ಕಣದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಈ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದಿಂದ ಅಂಜಿನಪ್ಪ. ಎನ್, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ, ಟಿ. ಎರ್ರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ಕಣದಲ್ಲಿದ್ದಾರೆ.
ಉಪ ಚುನಾವಣೆಗೆ ನವೆಂಬರ್ 13ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಶಾಂತಿಯುತವಾಗಿ ಮುಕ್ತಾಯಗೊಂಡಿತು. ಸಂಡೂರು ತಾಲ್ಲೂಕಿನ ಸಂಡೂರು ಪಟ್ಟಣ, ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡಲು ಸಾಲಿನಲ್ಲಿ ನಿಂತಿದ್ದು ಕಂಡು ಬಂದಿತು.
ಕುಡತಿನಿ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೇ ಕಡೆ ಇರುವ 186, 187, 188 ಮತ್ತು 189 ಮತಗಟ್ಟೆ ಕೇಂದ್ರಗಳಲ್ಲಿ ಮಹಿಳೆಯರು ಸಾಲಾಗಿ ಬಂದು ಮತ ಚಲಾವಣೆ ಮಾಡಿದರು. ಸುಶೀಲಾನಗರ ಗ್ರಾಮದಲ್ಲಿಯೂ ಮಹಿಳೆಯರು ಸಾಲು ಸಾಲಾಗಿ ಬಂದು ಮತ ಚಲಾಯಿಸಿದರು.
ಬಳ್ಳಾರಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತೋರಣಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಖಿ ಮತಗಟ್ಟೆ ಸ್ಥಾಪಿಸಲಾಗಿತ್ತು. ಮತದಾರರು ಸಖಿ ಮತಗಟ್ಟೆಗೆ ಆಗಮಿಸಿ, ಹಕ್ಕು ಚಲಾಯಿಸಿದರು. ಬಳಿಕ ಅಲ್ಲಿಯೇ ಸ್ಥಾಪಿಸಲಾಗಿದ್ದ ಪಿಂಕ್ ಸೆಲ್ಫಿ ಬೂತ್‌ನಲ್ಲಿ ಶಾಹಿ ಹಾಕಿದ ಬೆರಳು ತೋರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಪ್ರಥಮ ಬಾರಿಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಿದ್ದ ಸಂಡೂರು ಪಟ್ಟಣದ ಯುವತಿ ಅವನಿತ್ ಸಂಡೂರು ತಾಲೂಕು ಪಂಚಾಯಿತಿ ಕಚೇರಿಯ ಮತಗಟ್ಟೆ ಸಂಖ್ಯೆ 67ರಲ್ಲಿ ಮೊದಲ ಬಾರಿಗೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಿದರು. ಹರ್ಷ ವ್ಯಕ್ತಪಡಿಸಿದರು.
ಸಂಡೂರು ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. ಈ ಬಾರಿಯ ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಬಿಜೆಪಿ ವಶಕ್ಕೆ ಪಡೆದುಕೊಳ್ಳಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಭರ್ಜರಿ ಪ್ರಚಾರವನ್ನು ಮಾಡಿದ್ದರು. ಯಾರಿಗೆ ಗೆಲುವು? ಎಂದು ಕಾದು ನೋಡಬೇಕಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications