ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ

By ವಿಜಯನಗರ ಪ್ರತಿನಿಧಿ
|
Google Oneindia Kannada News

ವಿಜಯನಗರ, ಜುಲೈ 22; ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದಿಂದ ಎಡದಂಡೆ ಕೆಳಮಟ್ಟದ ಕಾಲುವೆಗೆ ನೀರು ಬಿಡಲಾಗಿದೆ. ಜಲಾಶಯ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಜೀವನಾಡಿಯಾಗಿದೆ.

ಗುರುವಾರ ಸಂಜೆ ತುಂಗಭದ್ರಾ ಡ್ಯಾಂ ಆಡಳಿತ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಿ. ನಾಗಮೋಹನ್ ಪೂಜೆ ಸಲ್ಲಿಸಿ ಎಡದಂಡೆ ಕೆಳಮಟ್ಟದ ಕಾಲುವೆಗೆ ನೀರು ಬಿಡುಗಡೆ‌ ಮಾಡಿದರು.

ಭದ್ರಾ ಡ್ಯಾಂ ಬುಡದಲ್ಲಿ ಕೋಟಿ ಕೋಟಿ ಲೂಟಿ; ಯಾರದ್ದೋ ಧನದಾಹಕ್ಕೆ 'ಡ್ಯಾಂ'ಗೆ ಹಾನಿಯ ಭೀತಿಭದ್ರಾ ಡ್ಯಾಂ ಬುಡದಲ್ಲಿ ಕೋಟಿ ಕೋಟಿ ಲೂಟಿ; ಯಾರದ್ದೋ ಧನದಾಹಕ್ಕೆ 'ಡ್ಯಾಂ'ಗೆ ಹಾನಿಯ ಭೀತಿ

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜುಲೈ 18 ರಿಂದ ಎಲ್ಲಾ ಕಾಲುವೆಗಳಿಗೆ ನೀರು ಹರಿಸುವಂತೆ ನಿರ್ಧಾರ ಕೈಗೊಳ್ಳಲಾಗಿತ್ತು. ಕಾಲುವೆ ದುರಸ್ತಿ ಇರುವ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಹರಿಸಿರಲಿಲ್ಲ" ಎಂದರು.

ತುಂಗಭದ್ರಾ ಡ್ಯಾಂಗೆ ಕೈಗಾರಿಕಾ ಭದ್ರತಾ ಪಡೆ ರಕ್ಷಣೆ ತುಂಗಭದ್ರಾ ಡ್ಯಾಂಗೆ ಕೈಗಾರಿಕಾ ಭದ್ರತಾ ಪಡೆ ರಕ್ಷಣೆ

Water Release From Tungabhadra Dam Low Level Canal

"ಸದ್ಯ ರಾಜ್ಯದ ಪಾಲಿನ 400 ಕ್ಯೂಸೆಕ್ ನೀರನ್ನು ಕಾಲುವೆಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯಕ್ಕೆ 43,407 ಕ್ಯೂಸೆಕ್ ಒಳಹರಿವು ಇದೆ. ಕಳೆದ ಒಂದು ವಾರದಿಂದಲೂ ಹೆಚ್ಚಿನ ಒಳಹರಿವು ದಾಖಲಾಗುತ್ತಿದೆ" ಎಂದರು.

ಕರ್ನಾಟಕದ ಕೋಟಾ; ಪ್ರಸ್ತುತ ಕರ್ನಾಟಕದ ಪಾಲಿನ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುತ್ತಿದೆ. ದಿನ ಕಳೆದಂತೆ ನೀರು ಹರಿಸುವ ಪ್ರಮಾಣ ಹೆಚ್ಚಾಗಲಿದೆ. ಆಂಧ್ರ ಪ್ರದೇಶ ರಾಜ್ಯ ಇನ್ನೂ ನೀರಿಗೆ ಬೇಡಿಕೆ ಸಲ್ಲಿಸದ ಕಾರಣ ಅವರ ಪಾಲಿನ ನೀರು ಹರಿಸಿಲ್ಲ.

ಬಿಡುವು ನೀಡಿದ ಮಳೆ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಬಿಡುವು ನೀಡಿದ ಮಳೆ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ

ತುಂಗಭದ್ರಾ ಜಲಾಶಯದ ಪೂರ್ಣ ಮಟ್ಟ 497.71 ಮೀಟರ್. ಇಂದಿನ ನೀರಿನ ಮಟ್ಟ 494.19 ಮೀಟರ್ ಆಗಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಆದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ.

English summary
400 cusec of water released from Tungabhadra Dam to low level canal (LLC) on July 22, 2021. Dam reported 43,407 cusec of inflow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X