ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಅಕ್ಟೋಬರ್ 13: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಇಂದು ಹಾಗೂ ನಾಳೆ ಬೀದರ್, ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿಯೂ ಕಳೆದ ಒಂದು ವಾರದಿಂದ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರೀ ಗಾಳಿ ಹಾಗೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆಯಾ ತಾಲೂಕು ತಹಶೀಲ್ದಾರರು, ಸಹಾಯಕ ಆಯುಕ್ತರು ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ.

Ballari: Yellow Alert Issued As Forecast Of Heavy Rain And Wind

ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮತ್ತೆ ಪ್ರವಾಹದಂತಹ ಪರಿಸ್ಥಿತಿ ತಲೆದೋರಿದೆ. ಘಟಪ್ರಭಾ, ಮಲಪ್ರಭಾ, ಕಾಗಿಣಾ ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

English summary
The Department of Meteorology has issued Yellow Alert for the next three to four days in ballari as forecast of heavy rain
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X