ಅಚ್ಚರಿ: ಕಿರಿಯ ವಯಸ್ಸಿನ ಬಳ್ಳಾರಿ ಮೇಯರ್ ರಾಜೀನಾಮೆ: ಹೊಸ ಆಯ್ಕೆಗೆ ದಿನಾಂಕ ನಿಗದಿ
ಬಳ್ಳಾರಿ, ನವೆಂಬರ್ 21: ಬಳ್ಳಾರಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿಗೆ ಮೇಯರ್ ಪಟ್ಟವನ್ನು ಅಲಂಕರಿಸಿದ್ದ ಡಿ.ತ್ರಿವೇಣಿ ಸೂರಿ ಇದೀಗ ಸದ್ದಿಲ್ಲದೇ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲೇ ಕಿರಿಯ ವಯಸ್ಸಿನಲ್ಲಿ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ್ದ ತ್ರಿವೇಣಿ ನವೆಂಬರ್ 4ರಂದು ತಮ್ಮ ಸ್ಥಾನ ತ್ಯಜಿಸಿದ್ದಾರೆ.
ತ್ರಿವೇಣಿ ರಾಜೀನಾಮೆ ಪತ್ರವನ್ನು ಮಹಾನಗರಪಾಲಿಕೆ ಕಮಿಷನರ್ ಕಚೇರಿಯ ಟಪಾಲ್‌ನಲ್ಲಿ ಕೊಟ್ಟು ಹೋಗಿದ್ದರು. ಸಾಮಾನ್ಯವಾಗಿ ಪಕ್ಷದ ಅಧ್ಯಕ್ಷರು ಅಥವಾ ಜವಾಬ್ದಾರಿ ಸ್ಥಾನದಲ್ಲಿರುವವರಿಗೆ ರಾಜೀನಾಮೆ ಸಲ್ಲಿಸಲಾಗುತ್ತದೆ. ಆದರೆ ತ್ರಿವೇಣಿ ರಾಜೀನಾಮೆ ಪತ್ರ ಟಪಾಲ್‌ನಲ್ಲಿ ಬಂದಿದ್ದನ್ನು ಕಂಡು ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಯಾಕೆ ಹೀಗೆ ರಾಜೀನಾಮೆ ನೀಡಿದ್ದಾರೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ಬಳ್ಳಾರಿ ನಗರದ ಮೇಯರ್ ಸ್ಥಾನಕ್ಕೆ ಅತೀ ಕಿರಿಯ ವಯಸ್ಸಿನ ತ್ರಿವೇಣಿ ಅವರನ್ನು ಆಯ್ಕೆ ಮಾಡುವಾಗ ಅದೇ ಸ್ಥಾನಕ್ಕೆ ಉಮಾದೇವಿ ಮತ್ತು ಕುಬೇರ ಪ್ರಬಲ ಆಕಾಂಕ್ಷಿಗಳಾಗಿದ್ದರು. ಹೀಗಾಗಿ ಪಕದಲ್ಲಿ ಆತಂಕರಿಕ ಕಲಹ ಬೇಡ ಎನ್ನುವ ದೃಷ್ಟಿ ಯಿಂದ ಅವರನ್ನು ಸಮಾಧಾನಪಡಿಸಲು ತ್ರಿವೇಣಿ ಅವರಿಗೆ ಆರು ತಿಂಗಳ ಅವಧಿ ನಿಗದಿಪಡಿಸಿ ಷರತ್ತು ಹಾಕಿ ಮೇಯರ್ ಸ್ಥಾನ ನೀಡಲಾಗಿತ್ತು ಎನ್ನಲಾಗಿದೆ.
ಆರು ತಿಂಗಳ ಅವಧಿ ಮುಗಿದ ಬಳಿಕ ತ್ರಿವೇಣಿ ಅವರನ್ನು ಮೇಯರ್ ಸ್ಥಾನದಿಂದ ಇಳಿಸುವ ಬದಲು ಅವರೇ ಮುಂದುವರಿಯಲಿ ಎನ್ನುವ ಅಭಿಪ್ರಾಯ ಹಲವರಲ್ಲಿತ್ತು. ಆದರೆ ಕೆಲವರು ರಾಜೀನಾಮೆಗೆ ಒತ್ತಾಯಿಸಿದ್ದರು. ಹೀಗಾಗಿ ಈ ಒತ್ತಡಗಳಿಗೆ ಬೇಸತ್ತು ತ್ರಿವೇಣಿ ರಾಜೀನಾಮೆ ಕೊಟ್ಟು ಹೋಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಇದೀಗ ಬಳ್ಳಾರಿ ಮೇಯರ್ ಸ್ಥಾನ ತೆರವಾಗಿದ್ದು ನವೆಂಬರ್ 28ಕ್ಕೆ ಹೊಸ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಚುನಾವಣೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸಲು ಸಿಆರ್‌ಪಿಸಿ ಕಾಯ್ದೆ 1973 ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ನವೆಂಬರ್ 28ರಂದು ಮಹಾನಗರ ಪಾಲಿಕೆಯ 500 ಮೀ. ವ್ಯಾಪ್ತಿಯಲ್ಲಿ ನಿಷೇಧಿಸಲಾದ ಚಟುವಟಿಕೆಗಳು ಈ ಕೆಳಗಿನಂತಿದೆ.
ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿಗದೆ, ಬಂದೂಕು, ಚಾಕು, ಚೂರಿ, ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡಲು ಉಪಯೋಗಿಸಬಹುದಾದ ಯಾವುದೇ ವಸ್ತು ತೆಗೆದುಕೊಂಡು ಹೋಗುವುದು ನಿಷೇಧಿಸಲಾಗಿದೆ.
ಯಾವುದೇ ದಾಹಕ (ನಾಶಕಾರಿ) ಇಲ್ಲವೆ ಸ್ಫೋಟಕ ವಸ್ತು ಒಯುವುದು, ಪಟಾಕಿ / ಸಿಡಿಮದ್ದು ಸಿಡಿಸುವುದು. ಕಲ್ಲು ಎಸೆಯುವ ವಸ್ತು ಅಥವಾ ಅಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಶಸ್ತ್ರಗಳು ಅಥವಾ ಸಾಧನಗಳು ಇವುಗಳನ್ನು ತೆಗೆದುಕೊಂಡು ತಿರುಗಾಡುವುದು. ಕಾರು/ಮೋಟರ್ ಬೈಕ್ ಮತ್ತು ಇತರೆ ವಾಹನಗಳಲ್ಲಿ ರ್ಯಾಲಿಯನ್ನು ಆಯೋಜಿಸುವುದು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನಕೂಟಗಳನ್ನು ಏರ್ಪಡಿಸುವುದು. 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ತಿರುಗಾಡುವುದು. (ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಹೊರತು ಪಡಿಸಿ).
ಅದೇ ರೀತಿಯಾಗಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನವನ್ನು ಹಾಗೂ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಯಾವುದೇ ವಸ್ತು ಅಥವಾ ಪದಾರ್ಥದ ತಯಾರಿ ಪ್ರದರ್ಶನ ಅಥವಾ ಪ್ರಸಾರ ಮಾಡುವುದು ನಿಷೇಧಿಸಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications