1500 ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿಗೆ ಆದೇಶ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿನ ಅನುದಾನಿತ ಪದವಿ ಕಾಲೇಜುಗಳಲ್ಲಿ ಕೆಲವಾರು ವರ್ಷಗಳಿಂದ ಖಾಲಿ ಇರುವ 1500 ಪ್ರೊಫೆಸರ್ ಗಳ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ವಿಚಾರ ತಿಳಿಸಿದರು.

ಖಾಲಿ ಇರುವ 1500 ಸರ್ವೇಯರ್ ಹುದ್ದೆಗಳ ಭರ್ತಿ ಶೀಘ್ರ: ಕಾಗೋಡು

ಗುರುವಾರ (ಆಗಸ್ಟ್ 24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ಮಾಡುವಂತೆ ಸಾಕಷ್ಟು ದಿನಗಳಿಂದ ಒತ್ತಾಯವಿತ್ತು. ಶಿಕ್ಷಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಮಾಜಿ ಸಚಿವ ಬಸವರಾಜ ಹೊರಟ್ಟಿ, ಮರಿತಿಬ್ಬೇಗೌಡ ಮುಂತಾದವರು ಈ ಬಗ್ಗೆ ಸರ್ಕಾರವನ್ನು ಆಗ್ರಹಿಸುತ್ತಲೇ ಇದ್ದರು. ಈ ಹಿನ್ನೆಲೆಯಲ್ಲಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ'' ಎಂದರು ತಿಳಿಸಿದರು.

ನಾನಾ ಇಲಾಖೆಗಳ ಆರು ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ

ರಾಜ್ಯದಲ್ಲಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 3000 ಸಹಾಯಕ ಪ್ರೊಫೆಸರ್‌ಗಳ ಹುದ್ದೆಗಳು ಖಾಲಿ ಇದ್ದು, ಈ ಪೈಕಿ 2,160 ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ 412 ಸರ್ಕಾರಿ ಪದವಿ ಕಾಲೇಜುಗಳ ಪೈಕಿ 390 ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ. ಇವನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅವರು ತಿಳಿಸಿದರು.

 ಮುಂದೆ ವಿಶೇಷ ನಿಯಮ

ಮುಂದೆ ವಿಶೇಷ ನಿಯಮ

ಇದೇ ವೇಳೆ, ಹುದ್ದೆ ಭರ್ತಿ ವಿಚಾರದಲ್ಲಿ ಸರ್ಕಾರದಿಂದ ವಿಳಂಬ ನೀತಿ ಅನುಸರಿಸಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಯುಜಿಸಿ ನಿಯಮಗಳು ಮತ್ತು ಬಡ್ತಿ ಮೂಲಕ ಈ ಹುದ್ದೆಗಳನ್ನು ತುಂಬಬೇಕು ಎಂಬ ಕಾಲೇಜು ಪ್ರೊಫೆಸರ್‌ಗಳ ಒತ್ತಾಯದಿಂದಾಗಿ ವಿಳಂಬವಾಗಿದೆ. ಮುಂದಿನ ತಿಂಗಳಲ್ಲಿ ಪ್ರಾಂಶುಪಾಲರ ನೇಮಕಾತಿಯಲ್ಲಿ ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

 ಸರ್ಕಾರಿ ಪಾಲಿಟೆಕ್ನಿಕ್

ಸರ್ಕಾರಿ ಪಾಲಿಟೆಕ್ನಿಕ್

ವಿದ್ಯಾರ್ಥಿನಿಯರ ಒಟ್ಟು ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 23 ಮಹಿಳಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ. ಗ್ರಾಮೀಣ ಮತ್ತು ಹಿಂದುಳಿದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪಡೆಯುವುದಕ್ಕೆ ಉತ್ತೇಜನ ನೀಡಲು 25 ಹೊಸ ಸರ್ಕಾರಿ ಪಾಲಿಟೆಕ್ನಿಕ್‌ಗಳನ್ನು ರಾಜ್ಯದ ವಿವಿಧೆಡೆ ಸ್ಥಾಪಿಸಲು ಆದೇಶ ಹೊರಡಿಸಲಾಗುತ್ತಿದೆ ಎಂದರು.

ಉಚಿತ ಲ್ಯಾಪ್ ಟಾಪ್

ಉಚಿತ ಲ್ಯಾಪ್ ಟಾಪ್

2017-18ನೇ ಸಾಲಿನಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ಪಾಲಿಟೆಕ್ನಿಕ್ ಮತ್ತು ಪ್ರಥಮ ದರ್ಜೆ ಸರ್ಕಾರಿ ಮತ್ತು ಅನುದಾನಿಕ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ವರ್ಷದ 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

 ಆರ್ಥಿಕ ಯೋಜನೆ

ಆರ್ಥಿಕ ಯೋಜನೆ

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಅವುಗಳನ್ನು ಪೂರೈಸಲು ಮಧ್ಯಮಾವಧಿ ಆರ್ಥಿಕ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Shortly 1500 Professors vacancies will be filled up says Minister of Higher Education, Basavaraja Rayareddy on August 24, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ