ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಹಮ್ಮದ್ ನಲಪಾಡ್‌ 2 ದಿನಗಳ ಕಾಲ ಪೊಲೀಸರ ವಶಕ್ಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 19 : ಮೊಹಮ್ಮದ್ ನಲಪಾಡ್‌ನನ್ನು 2 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಮೊಹಮ್ಮದ್ ನಲಪಾಡ್‌ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ.

ಸೋಮವಾರ ಸಂಜೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಮೊಹಮ್ಮದ್ ನಲಪಾಡ್‌ ಸೇರಿದಂತೆ 7 ಆರೋಪಿಗಳನ್ನು ಫೆ.21ರ ತನಕ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಹ್ಯಾರಿಸ್ ಪುತ್ರ ನಲಪಾಡ್ ಕೊನೆಗೂ ಪೊಲೀಸರಿಗೆ ಶರಣುಹ್ಯಾರಿಸ್ ಪುತ್ರ ನಲಪಾಡ್ ಕೊನೆಗೂ ಪೊಲೀಸರಿಗೆ ಶರಣು

ಮೊಹಮ್ಮದ್ ನಲಪಾಡ್‌ ಸೋಮವಾರ ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಶರಣಾಗಿದ್ದರು. ಮಧ್ಯಾಹ್ನ ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು 8ನೇ ಎಸಿಎಂಎಂ ಕೋರ್ಟ್‌ಗೆ ಆರೋಪಿಗಳನ್ನು ಹಾಜರುಪಡಿಸಿದ್ದರು.

2 days Police custody for Mohammed Nalapad

ಮೊಹಮ್ಮದ್ ನಲಪಾಡ್‌ ಹ್ಯಾರೀಸ್, ಬಾಲಕೃಷ್ಣ, ಮಂಜುನಾಥ್, ಅಭಿಷೇಕ್, ಅರುಣ್ ಬಾಬು ಮತ್ತು ನಫಿ ಅಹಮದ್ ಪ್ರಕರಣದ ಆರೋಪಿಗಳಾಗಿದ್ದಾರೆ. ಎಲ್ಲಾ ಆರೋಪಿಗಳನ್ನು ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಹ್ಯಾರೀಸ್ ಪುತ್ರನಿಂದ ಹಲ್ಲೆ : ಯಾರು, ಏನು ಹೇಳಿದರು?ಹ್ಯಾರೀಸ್ ಪುತ್ರನಿಂದ ಹಲ್ಲೆ : ಯಾರು, ಏನು ಹೇಳಿದರು?

ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ಮತ್ತು ಸ್ಥಳ ಪರಿಶೀಲನೆಯ ಅಗತ್ಯವಿದೆ. ಆದ್ದರಿಂದ, ಎಲ್ಲಾ ಆರೋಪಿಗಳನ್ನು ವಶಕ್ಕೆ ನೀಡಬೇಕು ಎಂದು ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಫೆ.21ರ ತನಕ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.

ಶನಿವಾರ ರಾತ್ರಿ ಬೆಂಗಳೂರಿನ ಯು.ಬಿ.ಸಿಟಿಯ ಬಾರ್‌ನಲ್ಲಿ ಮೊಹಮ್ಮದ್ ನಲಪಾಡ್‌ ಮತ್ತು ಆತನ ಸ್ನೇಹಿತರು ವಿದ್ವತ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

English summary
Bengaluru 8th ACMM court handover the Mohammed Nalapad and 6 other accused to police custody till February 21, 2018. Mohammed Nalapad the son of Shantinagar Congress MLA N.A.Harris and brutally assaulted youth in restaurant on late Saturday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X