ಬೆಂಗಳೂರು : ಟಿಟಿ ಡಿಕ್ಕಿ, 2 ವರ್ಷದ ಮಗು ಸಾವು

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 05 : ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗುವಿಗೆ ಟಿಟಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತಪಟ್ಟ ಮಗುವನ್ನು ಸೀತಮ್ಮ (2) ಎಂದು ಗುರುತಿಸಲಾಗಿದೆ. ವಿದ್ಯಾರಣ್ಯಪುರ ಸಮೀಪದ ಚಿಕ್ಕವೆಂಕಟಪ್ಪ ಲೇಔಟ್‍ನಲ್ಲಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ ರಿವರ್ಸ್ಸ್ ತೆಗೆಯುವಾಗ ಈ ಘಟನೆ ನಡೆದಿದ್ದು, ಹಿಂಬದಿಯ ಚಕ್ರಕ್ಕೆ ಸಿಲುಕಿದ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. [ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 5 ಸಾವು]

bengaluru accident

ಸೀತಮ್ಮ ವಿದ್ಯಾರಣ್ಯಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಕಲಬುರಗಿ ಮೂಲದ ದಂಪತಿಯ ಪುತ್ರಿ. ಈ ಅಪಘಾತದ ಬಗ್ಗೆ ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಟಿ ಚಾಲಕ ಶೇಖರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. [ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ]
{gallery-feature_1}

ಬೈಕ್ ಡಿಕ್ಕಿ, ವೃದ್ಧ ಸಾವು : ಬೈಕ್ ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಹೊಸ ಬಿಇಎಲ್‌ನ ಅಯ್ಯಪ್ಪ ದೇವಾಲಯದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಡ್ಯೂಕ್ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, 61 ವರ್ಷದ ವಿನಾಯಕ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿನಾಯಕ ಅವರು ಸದಾಶಿವನಗರದ ಸಿಪಿಆರ್‌ಐ ವಸತಿಗೃಹದ ನಿವಾಸಿಯಾಗಿದ್ದಾರೆ. ಇಬ್ಬರು ಎಂ.ಎಸ್.ರಾಮಯ್ಯ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಆರ್.ಟಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
2-year-old girl Seethamma killed on the spot in road accident at Vidyaranyapura, Bengaluru on Tuesday, April, 5 morning.
Please Wait while comments are loading...