ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸಭೆಯಲ್ಲಿ ಶಾಸಕರ ಭದ್ರತೆಗಾಗಿ 200 ಮಾರ್ಷಲ್‌ಗಳ ನಿಯೋಜನೆ!

By Nayana
|
Google Oneindia Kannada News

ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಶನಿವಾರ ಬಹುಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭೆ ಸಭಾಂಗಣದಲ್ಲಿ 200ಕ್ಕೂ ಹೆಚ್ಚು ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಯಡಿಯೂರಪ್ಪ ವಿಶ್ವಾಸಮತ ಪರೀಕ್ಷೆ: 340, 346 ನಿಮಯಗಳು ಏನು ಹೇಳುತ್ತವೆ? ಯಡಿಯೂರಪ್ಪ ವಿಶ್ವಾಸಮತ ಪರೀಕ್ಷೆ: 340, 346 ನಿಮಯಗಳು ಏನು ಹೇಳುತ್ತವೆ?

ಕಾಂಗ್ರೆಸ್‌ ಮತ್ತು ಜೆಡಿಎಸ್ 117 ಜನ ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ 104 ಸದಸ್ಯರೊಂದಿಗೆ ಇನ್ನಿತರೆ 8 ಶಾಸಕರನ್ನು ಸೆಳೆದು ಬಹುಮತ ಸಾಬೀತುಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನಿರ್ದೇಶನದ ಅನುಸಾರ ಸುಪ್ರೀಂಕೋರ್ಟ್ ಮೊಗಸಾಲೆಯಲ್ಲಿ ಭಾರಿ ಪ್ರಮಾಣದ ಭದ್ರತೆಯನ್ನಿ ನಿಯೋಜಿಸಲಾಗಿದೆ.

200 marshalls deployed in Karnataka assembly

ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ 2018ರಲ್ಲಿ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಸಂಭವಿಸಿದ್ದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರಮಾಣದಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಹುಮತ ಸಾಬೀತು ನಿಗದಿಪಡಿಸಲು ಕಾಲಾವಕಾಶ ನೀಡಿದ್ದ ಗವರ್ನರ್ ಅರ್ಜಿ ಪ್ರಶ್ನಿಸಿ ನಡೆಸಿದ ವಿಚಾರಣೆ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವುದು ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಈ ಹಿನ್ನೆಲೆಯಲ್ಲಿ ಗೃಹ ಇಲಾಖೆ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಪ್ರಮಾಣದ ಭದ್ರತೆ ನಿಯೋಜಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

English summary
Department of Home has deployed more than 200 marshalls in karnataka assembly during confidence motion moved by chief minister Yeddyurappa on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X