ಬೆಂಗಳೂರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Posted By:
Subscribe to Oneindia Kannada

ಬೆಂಗಳೂರು, ಮೇ 28 : ಲಾಂಗ್ ಡ್ರೈವ್ ನೆಪದಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಇಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ.

ಮಧ್ಯಪ್ರದೇಶ ಮೂಲದ 26 ವರ್ಷದ ಯುವತಿ ಮೇಲೆ ಸಹೋದರನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, 6000 ರೂ.ಗಳನ್ನು ನೀಡಿ ಯಾರಿಗೂ ಈ ವಿಷಯ ಹೇಳದಂತೆ ಬೆದರಿಕೆ ಹಾಕಿದ್ದರು. ಆರ್‌ಎಂಎಸಿ ಯಾರ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. [ಚಿಕ್ಕಬಳ್ಳಾಪುರ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ]

rape

ಸಂತ್ರಸ್ತ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಗಳಾದ ದಿನೇಶ್, ಕೃಷ್ಣಮೂರ್ತಿ ಮತ್ತು ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ.. [ಬೆಂಗಳೂರು: ಮಹಿಳಾ ದಿನವೇ ಮತ್ತೊಂದು ಗ್ಯಾಂಗ್ ರೇಪ್]

ಘಟನೆ ವಿವರ : ಮೇ 13ರಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಇರುವ ಕಾಫಿಶಾಪ್‌ನಲ್ಲಿ ಎಲ್ಲರೂ ಸೇರಿದ್ದರು. ಅಲ್ಲಿಂದ ಲಾಂಗ್ ಡ್ರೈವ್ ಹೋಗುವುದಾಗಿ ಹೇಳಿದ ಆರೋಪಿಗಳು ಯುವತಿಯನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.

ಯಶವಂತಪುರ ಮಾರ್ಗವಾಗಿ ಆರ್‌ಎಂಸಿ ಯಾರ್ಡ್ ಬಳಿ ಇರುವ ರೂಮಿಗೆ ಯುವತಿಯನ್ನು ಕರೆದುಕೊಂಡು ಹೋದ ಆರೋಪಿಗಳು, ಬೆದರಿಕೆ ಹಾಕಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ಬಳಿಕ 6 ಸಾವಿರ ರೂ. ಹಣ ನೀಡಿ ಯಾರಿಗೂ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾರೆ. ಯುವತಿ ಈ ಕುರಿತು ಆರ್‌ಸಿಎಂ ಯಾರ್ಡ್ ಪೊಲೀಸರಿಗೆ ದೂರು ಕೊಟ್ಟಿದ್ದಾಳೆ.

'ಮೇ 13ರಂದು ಸಾಮೂಹಿಕ ಅತ್ಯಾಚಾರ ನಡೆದಿದೆ. ಮೂವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ' ಎಂದು ಉತ್ತರ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A 26-year-old woman was allegedly gang raped by five people in RMC Yard police station limits, Bengaluru. Police arrested two persons in connection with the case.
Please Wait while comments are loading...