ಪೊಲೀಸರಿಗೆ ದೀಪಾವಳಿ ಕೊಡುಗೆ: ಶೇ.27ರಷ್ಟು ವೇತನ ಹೆಚ್ಚಳ

Posted By: Prithviraj
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 24: ದೀಪಾವಳಿ ಹಬ್ಬದ ಕೊಡುಗೆಯಾಗಿ ರಾಜ್ಯ ಸರ್ಕಾರ ಪೊಲೀಸರಿಗೆ ಶೇ.27ರಷ್ಟು ವೇತನ ಪರಿಷ್ಕರಣೆ ಮಾಡಲು ಮುಂದಾಗಿದ್ದು, ಪೊಲೀಸರ ಬಹುದಿನಗಳ ಬೇಡಿಕೆಗೆ ಈಡೇರಲಿದೆ.

ಇತ್ತೀಚೆಗಷ್ಟೇ ಸರ್ಕಾರಿ ನೌಕರರ ವೇತನದಲ್ಲಿ ಸರ್ಕಾರವು 4.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ಇದೀಗ ಪೊಲೀಸ್ ಸಿಬ್ಬಂದಿ ವೇತನದಲ್ಲಿ ಹೆಚ್ಚಳ ಮಾಡುತ್ತಿರುವುದು ದೀಪಾವಳಿಗೆ ಮುನ್ನವೇ ಪೊಲೀಸರಿಗೆ ಬಂಪರ್ ಕೊಡುಗೆ ಸಿಕ್ಕಂತಾಗಿದೆ.

27 percent pay hike for Karnataka state police

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಥವಾ ಬುಧವಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಗೃಹ ಇಲಾಖೆ ಮೂಲಗಳು ಖಚಿತಪಡಿಸಿವೆ. [ದೀಪಾವಳಿ ಗಿಫ್ಟ್ :ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ]

ಈ ಪರಿಷ್ಕರಣೆಯು ಪೊಲೀಸ್ ಪೇದೆಯಿಂದ ಹಿಡಿದು ಡಿವೈಎಸ್ಪಿ ಹಂತದ ಅಧಿಕಾರಿಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಎಡಿಜಿಪಿ ರಾಘವೇಂಧ್ರ ಔರಾದ್ಕರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯು ಪೊಲೀಸರ ವೇತನದಲ್ಲಿ ಶೇ.35ರಷ್ಟು ಹೆಚ್ಚಳ ಮಾಡುವಂತೆ ಮನವಿ ಮಾಡಿತ್ತು.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸಮಿತಿ ಶಿಫಾರಸ್ಸಿನಂತೆ ಏಕಕಾಲದಲ್ಲಿ ಅಷ್ಟೊಂದು ಪ್ರಮಾಣದಲ್ಲಿ ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲದಿರುವುದರಿಂದ ಸರ್ಕಾರವು ಶೇ.27ರಷ್ಟು ವೇತನ ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.

ಈ ಆದೇಶವು 2016ಜೂನ್ 1ರಿಂದಲೇ ಪೂರ್ವನ್ವಯವಾಗಲಿದೆ ಎಂದು ತಿಳಿದುಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Siddaramaiah given bumper offer to police on the occasion of Deepavali. Karnataka State police rejoice as government has decided to hike salary by 27 percent.
Please Wait while comments are loading...