ಬೆಂಗಳೂರು: ಯುವಕನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Posted By:
Subscribe to Oneindia Kannada

ಬೆಂಗಳೂರು, ಜನವರಿ 05: ಗುಂಪೊಂದು ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಸತೀಶ್ ರೆಡ್ಡಿ(28) ಹತ್ಯೆಯಾದ ಯುವಕ. ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ತನ್ನ ಪತ್ನಿಯನ್ನು ಇಂದು ಬೆಳಗ್ಗೆ ಬಿಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸತೀಶ್ ಅವರನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹತ್ಯಗೈದು ಪರಾರಿಯಾಗಿದ್ದಾರೆ.

ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ತ್ರಿಬಲ್ ಮರ್ಡರ್

ಸತೀಶ್ ಜಯಕರ್ನಾಟಕ ಸಂಘಟನೆ ಸೇರಿ ಹಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಅಲ್ಲದೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ.

28 year-old youth hacked to death in Bannerghatta Bengaluru

ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಪರಿಶೀಲನೆ ನಡೆಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹಳೆ ದ್ವೇಷದಿಂದಲೇ ಈ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A 28 year old youth hacked to death at Bannerghatta police station limits in Bengaluru, on January 5th. The deceased identified as Satish Reddy.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ