ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿ: 39 ಸಾವಿರ ಅರ್ಜಿಗಳು ಬಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ14 : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಸಾರ್ವಜನಿಕರು ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಬಿಬಿಎಂಪಿ ಅಧಿಕಾರಿಗಳು ಪರಿಶೀಲಿಸಿ, ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ. ಇದರಿಂದ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು 83,454 ಮಂದಿ ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ ಮತ್ತು ಚುನಾವಣಾ ಆಯೋಗದ ವೆಬ್ ಸೈಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 44,123 ಅರ್ಜಿಗಳನ್ನು ಪರಿಶೀಲಿಸಿ, ಹೆಸರು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಉಳಿದ 39,422 ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ.

ವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿವೋಟರ್ ಐಡಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಆನ್ ಲೈನ್ ಮೂಲಕ ಸಲ್ಲಿಸಿದ್ದ ಅರ್ಜಿಗಳ ಸ್ಥಿತಿಗತಿಯನ್ನು ತಿಳಿಯಲಾಗದೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಅತ್ಯಧಿಕ ಮಂದಿ ಅಂದರೆ 10,219 ಜನರು ಹೆಸರು ಸೇರ್ಪಡೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

39000 application pending for electoral registration

ಕೆಆರ್ ಪುರದಿಂದ 8753 , ಬೊಮ್ಮನಹಳ್ಳಿ 7218, ಬಿಟಿಎಂ ಲೇಔಟ್ ಕ್ಷೇತ್ರದಿಂದ 976 ಅರ್ಜಿಗಳು ಸಲ್ಲಿಕೆಯಾಗಿವೆ. ಮಹದೇವಪುರ ಕ್ಷೇತ್ರದ 10,519 ಅರ್ಜಿಗಳ ಪೈಕಿ 4,199 ಅರ್ಜಿಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಎಸ್‌ಎಂಎಸ್‌ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿಎಸ್‌ಎಂಎಸ್‌ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿ

ಬಹುತೇಕ ಮಂದಿ ಆನ್ ಲೈನ್ ಮೂಲಕ ಜ.22ರ ಬಳಿಕ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟಿಸಿದ್ದು, ಫೆ.28ಕ್ಕೆ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತಿದೆ. ಆ ಬಳಿಕ ಆನ್ ಲೈನ್ ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ ಎಂದು ಬಿಬಿಎಂಪಿ ಸಹಾಯಕ ಆಯುಕ್ತ ಡಿ.ಬಿ. ನಟೇಶ್ ತಿಳಿಸಿದ್ದಾರೆ.

ಮತದಾರರ ಅರ್ಜಿ ಪರಿಶೀಲನೆ ನಿದಾನ ಗತಿಯಲ್ಲಿ ಸಾಗುತ್ತಿದೆ. ಇನ್ನೂ 40 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಅರ್ಜಿಗಳನ್ನು ಸ್ವೀಕರಿಸಲು ಯಾವುದೇ ತಂತ್ರಜ್ಞಾನ ಅಳವಡಿಸಿಲ್ಲ, ನೋಂದಣಿ, ಅಪಡೇಟ್, ತಿರಸ್ಕರಣೆ ಇದ್ಯಾವುದಕ್ಕೂ ಸರಿಯಾದ ಮಾನದಂಡವಿಲ್ಲ. ಬಿಬಿಎಂಪಿಯು ತಮ್ಮ ಕಾರ್ಯದ ವೇಗವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಎಂಎಲ್ ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

English summary
39000 application pending for electoral registration. BBMP officials not yet started scrutiny for this application. This leads to choose in new electoral.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X