ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ 6 ಲಕ್ಷ ಮಕ್ಕಳು ಪಟಾಕಿ ಹೊಡೆಯೋಲ್ಲ

|
Google Oneindia Kannada News

ಬೆಂಗಳೂರು, ನ.2 : ಉದ್ಯಾನನಗರಿ ಬೆಂಗಳೂರಿನಲ್ಲಿ ಈ ಬಾರಿಯ ದೀಪಾವಳಿಗೆ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪಟಾಕಿ ಹೊಡೆಯದೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡುತ್ತೇವೆ ಎಂದು ಸಂಕಲ್ಪ ಮಾಡಿದ್ದಾರೆ. ಆದ್ದರಿಂದ ನಗರದಲ್ಲಿ ಪಟಾಕಿಗಳಿಂದ ಉಂಟಾಗುವ ಮಾಲಿನ್ಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.

ಶಾಲಾ ಮಕ್ಕಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಮಾಡುವಂತೆ ಮಾಲಿನ್ಯ ನಿಯಂತ್ರಂಣ ಮಂಡಳಿ ನೀಡಿದ ಕರೆ ಯಶಸ್ವಿಯಾಗಿದ್ದು, ಸುಮಾರು 6 ಲಕ್ಷ ಮಕ್ಕಳು ಪಟಾಕಿಯಿಂದ ದೂರವಿರುತ್ತೇವೆ ಎಂದು ಸಂಕಲ್ಪ ಮಾಡಿದ್ದಾರೆ. ಇದರಿಂದ ನಗರದಲ್ಲಿ ವಾಯು ಮತ್ತು ಶಬ್ದ ಮಾಲಿನ್ಯ ಸ್ಪಲ್ಪ ಕಡಿಮೆಯಾಗಲಿದೆ.

Diwali

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಾಮನಾಚಾರ್ಯ ಈ ಕುರಿತು ಹೇಳಿಕೆ ನೀಡಿದ್ದು, ಶಾಲೆಯಲ್ಲಿನ ಮಕ್ಕಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಕರೆ ನೀಡಿದರೆ ಅವರು ಅದನ್ನು ತಮ್ಮ ಪೋಷಕರಿಗೂ ತಲುಪಿಸುತ್ತಾರೆ. 120 ಡಿಸಿಬಲ್ ಗಿಂತ ಹೆಚ್ಚಿನ ಶಬ್ದ ಬರುವ ಪಟಾಕಿಗಳನ್ನು ಬಳಸಬೇಡಿ ಎಂದು ಜನರಿಗೆ ಮನವಿ ಮಾಡಿರುವುದಾಗಿ ಹೇಳಿದರು.

ನಾವು ದೀಪಾವಳಿಯನ್ನು ಬೆಳಕಿನ ಹಬ್ಬವಾಗಿ ಆಚರಣೆ ಮಾಡುತ್ತೇವೆ, ಮಾಲಿನ್ಯದ ಹಬ್ಬವಾಗಿ ಆಚರಣೆ ಮಾಡುವುದಿಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದ್ದಾನೆ. ವಾಯು, ಶಬ್ದ ಮಾಲಿನ್ಯ ತಡೆಗಟ್ಟುವ ಸಲುವಾಗಿ ನಾವು ಆದಷ್ಟು ಕಡಿಮೆ ಪರಾಕಿಗಳನ್ನು ಹೊಡೆಯಲು ಪ್ರಯತ್ನಿಸುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ನಾವು ಮನೆಯಲ್ಲಿ ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿ ಆಚರಣೆ ಮಾಡಲು ಮುಂದಾಗಿದ್ದೇವೆ. ಪಟಾಕಿಗಳನ್ನು ಸುಡುವುದಿಲ್ಲ ಎಂದು ಎಲ್ಲಾ ಸ್ನೇಹಿತರು ಸೇರಿ ನಿರ್ಧಾರ ಕೈಗೊಂಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಬೆಂಗಳೂರಿನ ಶಾಲೆಗಳ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುತ್ತಾರೆ.

English summary
At least six lakh children across Bangalore have said no to crackers this Diwali they said we will celebrate Diwali by lighting up my house and not bursting carckets. State Pollution Control Board is confident that the initiative is going to make a big difference. High decibel levels, pollution and the possibility of getting injured - these are what school children in Bangalore are trying to avoid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X